ಜಿಂಕೆ ರಕ್ಷಿಸಿದ ಅಗ್ನಿಶಾಮಕದಳದ ಸಿಬ್ಬಂದಿ

ಭಾನುವಾರ, ಜೂನ್ 16, 2019
28 °C

ಜಿಂಕೆ ರಕ್ಷಿಸಿದ ಅಗ್ನಿಶಾಮಕದಳದ ಸಿಬ್ಬಂದಿ

Published:
Updated:

ಕೆಜಿಎಫ್‌: ಬಿಜಿಎಂಎಲ್‌ನ ಗೋಲ್ಕಂಡ ಶಾಫ್ಟ್‌ ಬಳಿಯ ಬಾವಿಯೊಂದಕ್ಕೆ ಬಿದ್ದಿದ್ದ ಜಿಂಕೆಯನ್ನು ಅಗ್ನಿಶಾಮಕದಳದ ಸಿಬ್ಬಂದಿ ಈಚೆಗೆ ರಕ್ಷಿಸಿದ್ದಾರೆ.

ನಿರ್ಜನ ಪ್ರದೇಶದಲ್ಲಿರುವ ಬಾವಿಯಲ್ಲಿ ಜಿಂಕೆ ಬಿದ್ದಿರುವುದನ್ನು ದಾರಿಹೋಕರೊಬ್ಬರು ಕಂಡು ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ಮುಟ್ಟಿಸಿದ್ದರು. ಜಿಲ್ಲಾ ಅಗ್ನಿಶಾಮಕದಳದ ಅಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ತಂಡ ಸುಮಾರು ಐವತ್ತು ಅಡಿ ಆಳದಲ್ಲಿ ಬಿದ್ದಿದ್ದ ಜಿಂಕೆಯನ್ನು ಯಶಸ್ವಿಯಾಗಿ ಹೊರತೆಗೆಯಿತು.

ಗಾಬರಿಗೊಂಡಿದ್ದ ಜಿಂಕೆ ಸುಸ್ತಾಗಿದ್ದರೂ ಆರೋಗ್ಯವಾಗಿತ್ತು. ನಂತರ ಅದನ್ನು ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಕಾಡಿಗೆ ಬಿಡಲಾಯಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry