ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ

ಶಿಕಾರಿಪುರ: ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಮಧು ಬಂಗಾರಪ್ಪ ಘೋಷಣೆ
Last Updated 3 ಅಕ್ಟೋಬರ್ 2017, 10:28 IST
ಅಕ್ಷರ ಗಾತ್ರ

ಶಿರಾಳಕೊಪ್ಪ: ಜಿಲ್ಲೆಯ ಏತ ನೀರಾವರಿ ಯೋಜನೆಗಳನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಹಾಗೂ ಸೊರಬದ ಶಾಸಕ ಮಧು ಬಂಗಾರಪ್ಪ ನೇತೃತ್ವದಲ್ಲಿ ನವೆಂಬರ್ 5ರಿಂದ ಪಕ್ಷವು ಪಾದಯಾತ್ರೆ ಹಮ್ಮಿಕೊಂಡಿದೆ.

ಹತ್ತಿರದ ಸುಣ್ಣದಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದ ತಾಳಗುಂದ, ಉಡುಗಣಿ ಹೋಬಳಿ ಮಟ್ಟದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಈ ವಿಷಯ ಪ್ರಕಟಿಸಿದರು.

ಸೊರಬ ತಾಲ್ಲೂಕಿನ ಮೂಡಿ, ಮೂಗೂರು ಏತ ನೀರಾವರಿ, ಶಿಕಾರಿಪುರ ತಾಲ್ಲೂಕಿನ ತಾಳಗುಂದ, ಉಡುಗಣಿ, ಹೊಸೂರು ಹೋಬಳಿ ಸೇರಿದಂತೆ ಜಿಲ್ಲೆಯ ನೀರಾವರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಲಾಗು
ವುದು ಎಂದು ತಿಳಿಸಿದರು.

ಪಾದಯಾತ್ರೆಯು ಆನವಟ್ಟಿಯಿಂದ ಹೊರಟು ಶಿರಾಳಕೊಪ್ಪ, ಶಿಕಾರಿಪುರ, ಉಡುಗಣಿ, ಈಸೂರು, ಆಯನೂರು ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳಲಿದ್ದು. ನವೆಂಬರ್ 8ರಂದು ಮುಕ್ತಾಯಗೊಳ್ಳಲಿದೆ. ಸುಮಾರು 150 ಕಿ.ಮೀ. ದೂರವನ್ನು ಪಾದಯಾತ್ರೆಯಲ್ಲಿ ಕ್ರಮಿಸಬೇಕಾಗಿದೆ. ಮಾಜಿ ಸಚಿವ ಬಸವರಾಜ ಹೊರಟ್ಟಿ, ಮಾಜಿ ಸಂಸದ ಎಚ್.ವಿಶ್ವನಾಥ್, ಶಾಸಕ ವೈ.ಎಸ್.ವಿ. ದತ್ತ ಮೊದಲಾದ ನಾಯಕರು ಪ್ರತಿನಿತ್ಯ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಈ ಹಿಂದೆ ತಾವು ಬಗರ್‌ ಹುಕುಂ ರೈತರ ಪರವಾಗಿ ಸೊರಬದ ಕೆರೆಹಳ್ಳಿಯಿಂದ ಶಿವಮೊಗ್ಗದವರೆಗೆ 10 ಸಾವಿರ ರೈತರ ಜತೆಗೆ ಪಾದಯಾತ್ರೆ ನಡೆಸಿದ ಪರಿಣಾಮ ಇಂದು ಆ ರೈತರಿಗೆ ರಕ್ಷಣೆ ಸಿಕ್ಕಿದೆ. ಸೊರಬ ತಾಲ್ಲೂಕಿನಲ್ಲಿ ಈಗಾಗಲೇ 21 ಸಾವಿರ ಎಕರೆ ಜಾಗಕ್ಕೆ ಹಕ್ಕುಪತ್ರ ನೀಡಲಾಗಿದೆ. ಉಳಿದ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲಾಗುವುದು. ಇದು ರಾಜ್ಯದಲ್ಲಿಯೇ ಹೆಚ್ಚು ಅರ್ಜಿಗಳನ್ನು ಇತ್ಯರ್ಥ ಪಡಿಸಿದ ತಾಲ್ಲೂಕು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಶ್ಲಾಘಿಸಿದ್ದಾರೆ ಎಂದರು.

ಚುನಾವಣೆಗೆ ಮೊದಲು ರೈತರಿಗೆ ಭರವಸೆ ನೀಡಿದಂತೆ ಹಕ್ಕುಪತ್ರ ನೀಡಲಾಗುತ್ತಿದೆ. ಈಗ ಭೀಕರ ಬರಗಾಲ ಎದುರಿಸುತ್ತಿರುವ ರೈತರಿಗೆ ನೀರು ಒದಗಿಸಲು ಪಾದಯಾತ್ರೆ ಮಾಡುತ್ತಿರುವುದಾಗಿ ಶಾಸಕರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT