ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬನಾರಸ್ ಹಿಂದೂ ವಿ.ವಿ: ಬಿಗಿ ಭದ್ರತೆಯೊಂದಿಗೆ ತರಗತಿ ಪುನರಾರಂಭ

Last Updated 3 ಅಕ್ಟೋಬರ್ 2017, 15:30 IST
ಅಕ್ಷರ ಗಾತ್ರ

ಲಖನೌ: ಹಿಂಸಾಚಾರ ನಡೆದ ಹತ್ತು ದಿನಗಳ ನಂತರ, ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಬಿಗಿ ಭದ್ರತೆಯೊಂದಿಗೆ ತರಗತಿಗಳು ಪುನರಾರಂಭಗೊಂಡಿವೆ.

‘ವಿಶ್ವವಿದ್ಯಾಲಯದ ಆವರಣದಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ಮಹಿಳಾ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ’ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಚುಡಾಯಿಸುವುದನ್ನು ವಿರೋಧಿಸಿ ಹಾಗೂ ಉತ್ತಮ ಭದ್ರತಾ ವ್ಯವಸ್ಥೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿನಿಯರ ಗುಂಪಿನ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ ನಂತರ ವಿಶ್ವವಿದ್ಯಾಲಯದ ಆವರಣದಲ್ಲಿ ಅಶಾಂತಿ ಭುಗಿಲೆದ್ದಿತ್ತು.

‘ಘಟನೆಯ ಹಿಂದೆ ಸಮಾಜಘಾತುಕ ಶಕ್ತಿಗಳ ಕೈವಾಡ ಇದೆ’ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆರೋಪಿಸಿದ್ದರು. ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸದ ಆರೋಪಕ್ಕೆ ಗುರಿಯಾಗಿದ್ದ ಕುಲಪತಿ ಗಿರೀಶ್‌ಚಂದ್ರ ತ್ರಿಪಾಠಿ ಸೋಮವಾರದಿಂದ ಅನಿರ್ದಿಷ್ಟ ಕಾಲ ರಜೆ ಮೇಲೆ ತೆರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT