ಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ₹2 ಕಡಿತ

ಮಂಗಳವಾರ, ಜೂನ್ 18, 2019
31 °C

ಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ₹2 ಕಡಿತ

Published:
Updated:
ಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ₹2 ಕಡಿತ

ನವದೆಹಲಿ: ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಮಂಗಳವಾರ ₹2ರಷ್ಟು ಕಡಿತ ಮಾಡಿದೆ.

ಕಳೆದ ಮೂರು ತಿಂಗಳಿಂದ ತೈಲ ದರದಲ್ಲಿ ಏರಿಕೆ ಕಂಡಿದೆ. ದರ ಹೆಚ್ಚಳ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿ ಲೀಟರ್‌ ಪೆಟ್ರೀಲ್‌ ಹಾಗೂ ಡೀಸೆಲ್‌  ಮೇಲಿನ ಅಬಕಾರಿ ಸುಂಕವನ್ನು ₹2ರಷ್ಟು ಕಡಿತಗೊಳಿಸಿರುವುದಾಗಿ ಹಣಕಾಸು ಸಚಿವಾಲಯ ಟ್ವೀಟ್‌ ಮಾಡಿದೆ.

ಅಬಕಾರಿ ಸುಂಕ ಕಡಿತ ಅಕ್ಟೋಬರ್‌ 4(ಬುಧವಾರ)ರಿಂದ ಜಾರಿಯಾಗಲಿದೆ. ಪ್ರಸ್ತುತ ಕೇಂದ್ರ ಸರ್ಕಾರ ಪ್ರತಿ ಲೀಟರ್‌ ಪೆಟ್ರೋಲ್‌ ಮೇಲೆ ₹21.48 ಹಾಗೂ ಡೀಸೆಲ್‌ಗೆ ₹17.33 ಸುಂಕ ವಿಧಿಸುತ್ತಿದೆ.

ಜುಲೈ 4ರಿಂದ ಈವರೆಗೂ ಪೆಟ್ರೋಲ್‌ ದರ ಪ್ರತಿ ಲೀಟರ್‌ಗೆ ₹7.8ರಷ್ಟು ಏರಿಕೆಯಾಗಿದ್ದು, ಡೀಸೆಲ್‌ ₹5.7ರಷ್ಟು ಹೆಚ್ಚಳ ಕಂಡಿದೆ. ತೈಲದ ಮೇಲಿನ ಅಬಕಾರಿ ಸುಂಕ ಕಡಿತದಿಂದ ಪ್ರಸಕ್ತ ಹಣಕಾಸು ವರ್ಷದಲ್ಲಿ ಸರ್ಕಾರಕ್ಕೆ ₹13 ಸಾವಿರ ಕೋಟಿ ಆದಾಯ ನಷ್ಟವಾಗಲಿದೆ ಎಂದಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry