ನ.23ರಿಂದ ಆಳ್ವಾಸ್ ಚಿತ್ರಸಿರಿ: ಕಲಾವಿದರಿಗೆ ಆಹ್ವಾನ

ಮಂಗಳವಾರ, ಜೂನ್ 18, 2019
23 °C

ನ.23ರಿಂದ ಆಳ್ವಾಸ್ ಚಿತ್ರಸಿರಿ: ಕಲಾವಿದರಿಗೆ ಆಹ್ವಾನ

Published:
Updated:

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನಾಡಿನ ಶ್ರೇಷ್ಠ ಕಲಾವಿದರನ್ನು ಒಗ್ಗೂಡಿಸುವ ಸಲುವಾಗಿ ಪ್ರತಿ ವರ್ಷ ರಾಜ್ಯ ಮಟ್ಟದ ಚಿತ್ರಕಲಾ ಶಿಬಿರವನ್ನು ಆಯೋಜಿಸುತ್ತಾ ಬಂದಿದ್ದು, ಈ ವರ್ಷವೂ ನವಂಬರ್ 23ರಿಂದ26ರವರೆಗೆ ಆಯೋಜಿಸಲು ನಿರ್ಣಯಿಸಲಾಗಿದೆ.

'ಆಳ್ವಾಸ್ ಚಿತ್ರಸಿರಿ 2017' ಎಂಬ ಹೆಸರಿನಲ್ಲಿ ನಡೆಯಲಿರುವ ಈ ರಾಜ್ಯಮಟ್ಟದ ಚಿತ್ರಕಲಾ ಶಿಬಿರದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 25 ರಿಂದ30 ಹಿರಿಯ, ಕಿರಿಯ ಸಮಕಾಲೀನ ಕಲಾವಿದರು ಭಾಗವಹಿಸಲಿದ್ದಾರೆ. ಇಲ್ಲಿ ಮೂರ್ತಗೊಳ್ಳುವ ಕಲಾಕೃತಿಗಳನ್ನು ನ. 31 ರಿಂದ ಡಿಸೆಂಬರ್ 3ರ ತನಕ ಆಳ್ವಾಸ್ ನುಡಿಸಿರಿಯ ಸಭಾಂಗಣದಲ್ಲಿ ಪ್ರದರ್ಶನಕ್ಕೆ ಇಡಲಾಗುವುದು.

ಆಸಕ್ತ ಚಿತ್ರಕಲಾವಿದರು ತಮ್ಮ ಇತ್ತೀಚಿನ 2-3 ಕಲಾಕೃತಿಗಳ ಭಾವಚಿತ್ರಗಳ ಜೊತೆಗೆ ಸ್ವವಿವರಗಳನ್ನು ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ-574227 ಈ ವಿಳಾಸಕ್ಕೆ ಇದೇ 15ರೊಳಗೆ ಕಳುಹಿಸಲು ತಿಳಿಸಲಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry