ಗಜಪಡೆಗೆ ಆತ್ಮೀಯ ಬೀಳ್ಕೊಡುಗೆ

ಬುಧವಾರ, ಜೂನ್ 26, 2019
28 °C
ಜಿಲ್ಲಾಡಳಿತ, ಅರಣ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮ

ಗಜಪಡೆಗೆ ಆತ್ಮೀಯ ಬೀಳ್ಕೊಡುಗೆ

Published:
Updated:
ಗಜಪಡೆಗೆ ಆತ್ಮೀಯ ಬೀಳ್ಕೊಡುಗೆ

ಮೈಸೂರು: ಅರಮನೆ ಆವರಣದಲ್ಲಿ ಮಂಗಳವಾರ ಬೆಳಿಗ್ಗೆ ಒಂದೆಡೆ ಖುಷಿ, ಮತ್ತೊಂದೆಡೆ ಬೇಸರ. ಲಾರಿಗಳನ್ನು ಕಂಡೊಡನೆ ಕಾಡಿಗೆ ತೆರಳುವ ವಿಚಾರ ಆನೆಗಳಿಗೂ ಖಚಿತವಾದಂತಿತ್ತು. ಮಾವುತರು ಹಾಗೂ ಕಾವಾಡಿಗರೂ ಖುಷಿಯಲ್ಲಿದ್ದರು. ಆದರೆ, ಪ್ರವಾಸಿಗರು ಮಾತ್ರ ಬೇಸರದಲ್ಲಿದ್ದರು.

ಜಂಬೂಸವಾರಿಯ ರೂವಾರಿಗಳಾದ ಗಜಪಡೆಗೆ ಬೀಳ್ಕೊಡಲು ಜಿಲ್ಲಾಡಳಿತ, ಅರಣ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕಂಡು ಬಂದ ದೃಶ್ಯಗಳಿವು.

ಅರಮನೆ ವೀಕ್ಷಿಸಲು ಬಂದಿದ್ದ ಮಕ್ಕಳು, ಯುವಕ–ಯುವತಿಯರು ಆನೆಗಳಿಗೆ ಹಣ್ಣು, ಇತರ ಆಹಾರ ಪದಾರ್ಥಗಳನ್ನು ತಿನ್ನಿಸಿ ಸಂಭ್ರಮಿಸಿದರು. ಕೆಲ ಮಕ್ಕಳು ಆನೆ ಮೇಲೆ ಮಾವುತರ ಜೊತೆ ಕುಳಿತರು.

ದಸರಾ ಮೆರವಣಿಗೆಗಾಗಿ ಒಂದೂವರೆ ತಿಂಗಳಿನಿಂದ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಆನೆಗಳು ಅರಣ್ಯ ಇಲಾಖೆ ಅಧಿಕಾರಿಗಳ ಬೆಂಗಾವಲಿನಲ್ಲಿ ತಮ್ಮ ಶಿಬಿರಗಳಿಗೆ ತೆರಳಿದವು.

ಬೀಳ್ಕೊಡುಗೆಗೂ ಮುನ್ನ ಗಜಪಡೆಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು. ಮಾವುತರು, ಕಾವಾಡಿಗರು ಹಾಗೂ ಅವರ ಕುಟುಂಬದವರಿಗೆ ಉಪಾಹಾರ ಕೂಟ ಆಯೋಜಿಸಲಾಗಿತ್ತು.

ಶಾಸಕ ಎಂ.ಕೆ.ಸೋಮಶೇಖರ್‌, ಜಿಲ್ಲಾಧಿಕಾರಿ ಡಿ.ರಂದೀಪ್‌ ಅವರು ಅರಮನೆ ಮಂಡಳಿ ವತಿಯಿಂದ ಮಾವುತ ಹಾಗೂ ಕಾವಾಡಿಗರಿಗೆ ಗೌರವಧನ ವಿತರಿಸಿದರು.

ಅರ್ಜುನ ಆನೆ ತಾನಾಗಿಯೇ ಲಾರಿ ಮೇಲೇರಿತು. ಬಹುತೇಕ ಆನೆಗಳನ್ನು ಲಾರಿಗೆ ಹತ್ತಿಸಲು ನೆರವಾಗಿದ್ದು ಅಭಿಮನ್ಯು. ಮಾವುತ ಹಾಗೂ ಕಾವಾಡಿಗಳ ಕುಟುಂಬದವರು ಗಂಟುಮೂಟೆ ಕಟ್ಟಿಕೊಂಡು ಶಿಬಿರದತ್ತ ಪ್ರಯಾಣ ಬೆಳೆಸಿದರು. ಪಕ್ಕದಲ್ಲೇ ನಿಂತಿದ್ದ ಅರಮನೆಯ ಆರು ಹೆಣ್ಣಾನೆಗಳು ದುಃಖದಲ್ಲಿ ಘೀಳಿಟ್ಟವು. ಅರ್ಜುನ ಆನೆಯು ಈಶ್ವರ ದೇಗುಲದ ಮುಂದೆ ಸೊಂಡಿಲೆತ್ತಿ ನಮಸ್ಕರಿಸಿತು.

ಅಭಿಮನ್ಯು ಆನೆ ಮಾತ್ರ ತಡವಾಗಿ ಪ್ರಯಾಣ ಬೆಳೆಸಿತು. ಮಾವುತ ವಸಂತ್‌ ಸಾರಥ್ಯದ ಈ ಆನೆಯು ಮೃಗಾಲಯದ ಒಂದು ಆನೆಯನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಸಾಗಿಸಲು ತೆರಳಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry