‘ಬಸವನಗುಡಿ ಕ್ಷೇತ್ರ ಕಾಮಗಾರಿಗಳಿಗೆ ₹10 ಕೋಟಿ’

ಮಂಗಳವಾರ, ಜೂನ್ 18, 2019
24 °C

‘ಬಸವನಗುಡಿ ಕ್ಷೇತ್ರ ಕಾಮಗಾರಿಗಳಿಗೆ ₹10 ಕೋಟಿ’

Published:
Updated:

ಬೆಂಗಳೂರು: ಬಸವನಗುಡಿ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಅನುಷ್ಠಾನಕ್ಕಾಗಿ ₹10 ಕೋಟಿ ಬಿಡುಗಡೆ ಮಾಡುವಂತೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಅವರು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್ ಪ್ರಸಾದ್ ಅವರಿಗೆ ಸೂಚಿಸಿದರು.

ಕ್ಷೇತ್ರ ವ್ಯಾಪ್ತಿಯಲ್ಲಿ ‌ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಸಚಿವ ಜಾರ್ಜ್ ಮಂಗಳವಾರ ಪರಿಶೀಲನೆ ನಡೆಸಿದರು.

ಕಾಳಿದಾಸ ಬಸ್ ನಿಲ್ದಾಣದ ಬಳಿ ನಿರ್ಮಿಸುತ್ತಿರುವ ಮಳೆನೀರು ಚರಂಡಿ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ, ಮಾರಿಹಳ್ಳ ಮಳೆನೀರು ಕಾಲುವೆ ವೀಕ್ಷಿಸಿದರು. ಇದರ ಸಮೀಪವಿರುವ ಎರಡು ಅನಧಿಕೃತ ಗುಡಿಸಲುಗಳನ್ನು ತೆರವುಗೊಳಿಸಿ, ಕಾಲುವೆಯಲ್ಲಿ ತುಂಬಿರುವ ಹೂಳನ್ನು ತೆಗೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮೇಯರ್ ಆರ್‌.ಸಂಪತ್ ರಾಜ್, ಉಪಮೇಯರ್ ಪದ್ಮಾವತಿ ಹಾಜರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry