ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ವಿರುದ್ಧ ಡಿವೈಎಫ್‌ಐ, ಎಸ್‌ಎಫ್‌ಐ ಆಕ್ರೋಶ

Last Updated 3 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ನಟ ಪ್ರಕಾಶ್ ರೈ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿರುವ ಬಿಜೆಪಿ ಮುಖಂಡರು ಅವರ ವಿರುದ್ಧ ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ’ ಎಂದು ಆರೋಪಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌ (ಡಿವೈಎಫ್‌ಐ) ಹಾಗೂ ಭಾರತೀಯ ವಿದ್ಯಾರ್ಥಿ ಒಕ್ಕೂಟದ (ಎಸ್‌ಎಫ್‌ಐ) ಕಾರ್ಯಕರ್ತರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ರೈ ವಿರುದ್ಧ ಬಿಜೆಪಿಯ ಮುಖಂಡರು ನೀಡುತ್ತಿರುವ ಹೇಳಿಕೆಗಳನ್ನು ಪ್ರತಿಭಟನಾಕಾರರು ಖಂಡಿಸಿದರು. ಸಾಮಾಜಿಕ ಜಾಲತಾಣದಲ್ಲಿ ಸಂಘ ಪರಿವಾರ ಮತ್ತು ಬಿಜೆಪಿ ಪಕ್ಷದವರು ತುಚ್ಚವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ನಗರದಲ್ಲಿ ಇತ್ತೀಚೆಗೆ ನಡೆದ ‘ಡಿವೈಎಫ್‌ಐ 11ನೇ ರಾಜ್ಯ ಸಮ್ಮೇಳನ’ದಲ್ಲಿ ಭಾಗವಹಿಸಿದ್ದ ಪ್ರಕಾಶ್ ರೈ, ‘ಗೌರಿ ಲಂಕೇಶ್‌ ಅವರನ್ನು ಕೊಂದವರು ಯಾರು ಎಂಬ ಸುಳಿವು ಸಿಕ್ಕಿಲ್ಲ. ಆದರೆ, ಈ ಅವರ ಸಾವನ್ನು ಸಂಭ್ರಮಿಸುತ್ತಿರುವ ವಿಕೃತ ಮನಸ್ಸಿನವರು ನಮ್ಮ ಕಣ್ಣಿಗೆ ಕಾಣುತ್ತಿದ್ದಾರೆ. ಈ ಹತ್ಯೆ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನವಾಗಿದ್ದಾರೆ’ ಎಂದು ಟೀಕಿಸಿದ್ದರು.

ಪ್ರತಿಭಟನೆಯಲ್ಲಿ ಮಾತನಾಡಿದ ಡಿವೈಎಫ್‌ಐ ರಾಜ್ಯ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ, ‘ಸಮಾವೇಶದಲ್ಲಿ ಪ್ರಕಾಶ್ ರೈ ಸತ್ಯ ಹೇಳಿದ್ದಾರೆ ಹಾಗೂ ಸರಿಯಾದದನ್ನೆ ಪ್ರಶ್ನೆ ಮಾಡಿದ್ದಾರೆ. ಅವರ ಪ್ರಶ್ನೆಗೆ ಉತ್ತರ ಕೊಡಬೇಕಾದವರು ಅವರನ್ನು ನಿಂದಿಸುತ್ತಿದ್ದಾರೆ. ಸಂಸದ ಪ್ರತಾಪ್ ಸಿಂಹ ಅಶ್ಲೀಲ ಪದಬಳಕೆ ಮಾಡಿ ಅವಹೇಳನ ಮಾಡಿದ್ದಾರೆ. ನಿಜವಾಗಿಯೂ ಚರ್ಚೆ ನಡೆಯ ಬೇಕಾದರೆ ಅದು ಆರೋಗ್ಯಕರವಾಗಿರಬೇಕು’ ಎಂದು ಅಭಿಪ್ರಾಯಪಟ್ಟರು.

ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್.ವಿಮಲಾ, ‘ಪ್ರತಾಪ್ ಸಿಂಹ ಅವರು ತಾವು ಸಂಸದ ಎಂಬುದನ್ನು ಮರೆತಂತಿದೆ. ವಾಟ್ಸ್‌ಆ್ಯಪ್, ಫೇಸ್‌ಬುಕ್ ಹಾಗೂ ಟ್ವಿಟರ್ ಮೂಲಕ ಅಶ್ಲೀಲವಾಗಿ ಅಭಿಪ್ರಾಯ ವ್ಯಕ್ತಪಡಿಸಿ ಅವರ ಘನತೆಯನ್ನು ಅವರರೇ ಅಳೆದುಕೊಂಡಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT