ಮಂಗಳವಾರ, ಸೆಪ್ಟೆಂಬರ್ 17, 2019
24 °C

ನಗರದಲ್ಲಿ ಎರಡು ದಿನ ಸಾಧಾರಣ ಮಳೆ

Published:
Updated:

ಬೆಂಗಳೂರು: ನಗರದ ಕೆಲವೆಡೆ ಇನ್ನೂ ಎರಡು ದಿನಗಳವರೆಗೆ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.

‘ರಾಜ್ಯದ ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವೆಡೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ’ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಎಸ್‌. ಎಸ್‌.ಎಂ.ಗಾವಸ್ಕರ್‌ ತಿಳಿಸಿದರು.

‘ಬಂಗಾಳ ಕೊಲ್ಲಿಯಲ್ಲಿ ಅಕ್ಟೋಬರ್‌ 6ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರಿಂದ ಒಡಿಶಾದಲ್ಲಿ ಭಾರಿ ಮಳೆ ಬೀಳಲಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಅಥವಾ ಮೋಡಕವಿದ ವಾತಾವರಣ ಇರಲಿದೆ’ ಎಂದು ಹೇಳಿದರು.

Post Comments (+)