ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿರತೆ ಸೆರೆಗೆ ಬೋನು

Last Updated 3 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ದಾಬಸ್‌ಪೇಟೆ: ನೆಲಮಂಗಲ ತಾಲ್ಲೂಕಿನ ರಾಮೇನಹಳ್ಳಿಯ ರಾಮದೇವರ ಬೆಟ್ಟ, ಚನ್ನೋಹಳ್ಳಿ ಹಾಗೂ ನಿಜಗಲ್ ಕೆಂಪೋಹಳ್ಳಿಯ ನೀಲಗಿರಿ ತೋಪುಗಳಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಚಿರತೆ ಸೆರೆಗೆ ಬೋನು ಇಟ್ಟಿದ್ದಾರೆ.

‘ಚನ್ನೋಹಳ್ಳಿ, ಕೆಂಪೋಹಳ್ಳಿ, ಜೇನಗರ ಪಾಳ್ಯ, ನರಸೀಪುರ ಗ್ರಾಮಗಳ 10ಕ್ಕೂ ಹೆಚ್ಚು ಮೇಕೆಗಳನ್ನು ಚಿರತೆಯು ತಿಂದಿದೆ. ಚಿರತೆಯು 2–3 ದಿನಗಳಿಂದ ಹಲವರ ಕಣ್ಣಿಗೆ ಬಿದ್ದಿದೆ. ಭಯಭೀತರಾದ ಸ್ಥಳೀಯರು ದೂರು ನೀಡಿದ್ದರು. ಚಿರತೆ ಸೆರೆಗೆ ಕ್ರಮ ಕೈಗೊಂಡಿದ್ದೇವೆ’ ಎಂದು ಅರಣ್ಯಾಧಿಕಾರಿ ಶ್ರೀನಾಥ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT