ಜಿಲ್ಲಾ ಪಂಚಾಯಿತಿ ವತಿಯಿಂದ ಉಚಿತ ಸೈಕಲ್‌ ವಿತರಣೆ

ಬುಧವಾರ, ಜೂನ್ 19, 2019
29 °C

ಜಿಲ್ಲಾ ಪಂಚಾಯಿತಿ ವತಿಯಿಂದ ಉಚಿತ ಸೈಕಲ್‌ ವಿತರಣೆ

Published:
Updated:

ಬೆಂಗಳೂರು: ಹೆಸರಘಟ್ಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 100 ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‍ ಹಾಗೂ 200 ವಿದ್ಯಾರ್ಥಿಗಳಿಗೆ ನೋಟ್‌ ಪುಸ್ತಕಗಳನ್ನು ಜಿಲ್ಲಾ ಪಂಚಾಯಿತಿ ವತಿಯಿಂದ ವಿತರಿಸಲಾಯಿತು.

ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಿಸಿ ಮಾತನಾಡಿದ ಯಲಹಂಕ ಶಾಸಕ ವಿಶ್ವನಾಥ್, ‘ಕುವೆಂಪು, ಬೇಂದ್ರೆ ಮತ್ತು ಕಾರಂತರು ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿಯೇ ಮುಗಿಸಿದ್ದರು. ನಮ್ಮಲ್ಲಿ ಸಾಧಿಸುವ ಛಲವಿದ್ದರೆ, ಯಾವ ಶಾಲೆಯಾದರೂ ಅಡ್ಡಿಯಾಗಲಾರದು’ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕೃಷ್ಣಯ್ಯ, ‘ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಇತರೆ ಸೌಲಭ್ಯವನ್ನು ನೀಡುತ್ತಿದ್ದು ಅವರ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣವನ್ನು ಕಲ್ಪಿಸಲಾಗಿದೆ. ಹೆಣ್ಣು ಮಕ್ಕಳಿಗೆ ಸೈಕಲ್‍ನ್ನು ನೀಡುತ್ತಿರುವುದರಿಂದ ಶಾಲೆಗೆ ಬರುವ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚುತ್ತಿದೆ’ ಎಂದು ಅಭಿಪ್ರಾಯಪಟ್ಟರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry