‘ಹರಪನಹಳ್ಳಿ ಕ್ಷೇತ್ರದ ಸೇವೆಗೆ ಬದ್ಧ’

ಸೋಮವಾರ, ಜೂನ್ 17, 2019
31 °C

‘ಹರಪನಹಳ್ಳಿ ಕ್ಷೇತ್ರದ ಸೇವೆಗೆ ಬದ್ಧ’

Published:
Updated:

ಬಳ್ಳಾರಿ: ‘ಹರಪನಹಳ್ಳಿ ಕ್ಷೇತ್ರದಲ್ಲಿ ಜೀವನಪೂರ್ತಿ ಸೇವೆ ಸಲ್ಲಿಸಲು ಬದ್ಧ’ ಎಂದು ಬಿಜೆಪಿ ಮುಖಂಡ ಜಿ.ಕರುಣಾಕರರೆಡ್ಡಿ ಹೇಳಿದರು. ನಗರದ ತಮ್ಮ ಮನೆಯಲ್ಲಿ ಮಂಗಳವಾರ ಕ್ಷೇತ್ರದ ಉಪ್ಪಾರ ಸಮುದಾಯದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ‘ಕ್ಷೇತ್ರದ ವಿವಿಧ ಸಮುದಾಯಗಳ ಸುಮಾರು ಹನ್ನೆರಡು ಸಾವಿರ ಮಂದಿ ಮನೆಗೆ ಬಂದು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ. ಅವರೆಲ್ಲರ ಬೆಂಬಲ ಪಡೆದಿರುವುದು ಧನ್ಯತೆ ಮೂಡಿಸಿದೆ’ ಎಂದರು.

‘2008ರಲ್ಲಿ ಶಾಸಕನಾಗಿ ಆಯ್ಕೆಯಾದ ಬಳಿಕ ಕ್ಷೇತ್ರವನ್ನು ಹಲವು ಬಗೆಯಲ್ಲಿ ಅಭಿವೃದ್ಧಿಗೊಳಿಸಿದ್ದರಿಂದಲೇ ಜನಬೆಂಬಲ ದೊರಕಿದೆ. ಮುಂದಿನ ಚುನಾವಣೆಯಲ್ಲೂ ಬೆಂಬಲವನ್ನು ನಿರೀಕ್ಷಿಸಿರುವೆ’ಎಂದರು.

‘ಕ್ಷೇತ್ರದ ಶಾಸಕ ಎಂ.ಪಿ.ರವೀಂದ್ರ ಹೆಸರಿಗೆ ಮಾತ್ರ ಶಾಸಕರಾಗಿದ್ದಾರೆ. ಅವರು ಕ್ಷೇತ್ರದ ಯಾವುದೇ ಹಳ್ಳಿಗಳಲ್ಲಿ ಸಂಚರಿಸಿಲ್ಲ. ಸುಳ್ಳು ಹೇಳುತ್ತಾ ಕಾಲ ಹರಣ ಮಾಡುತ್ತಿದ್ದಾರೆ. ನನ್ನ ಅವಧಿಯಲ್ಲಿ ಆರಂಭವಾದ ಅಭಿವೃದ್ಧಿ ಕೆಲಸಗಳನ್ನು ಪೂರ್ಣಗೊಳಿಸಲು ಅವರಿಂದ ಆಗುತ್ತಿಲ್ಲ’ ಎಂದು ದೂರಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry