17 ದಿನಗಳಲ್ಲಿ 2.41 ಲಕ್ಷ ಶೌಚಾಲಯ ನಿರ್ಮಿಸಿದ ಕರ್ನಾಟಕ

ಭಾನುವಾರ, ಜೂನ್ 16, 2019
22 °C

17 ದಿನಗಳಲ್ಲಿ 2.41 ಲಕ್ಷ ಶೌಚಾಲಯ ನಿರ್ಮಿಸಿದ ಕರ್ನಾಟಕ

Published:
Updated:
17 ದಿನಗಳಲ್ಲಿ 2.41 ಲಕ್ಷ ಶೌಚಾಲಯ ನಿರ್ಮಿಸಿದ ಕರ್ನಾಟಕ

ನವದೆಹಲಿ: ಕೇಂದ್ರ ಸರ್ಕಾರದ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದ ಅಂಗವಾಗಿ 17 ದಿನಗಳಲ್ಲೇ ಅತಿ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಿದ ರಾಜ್ಯಗಳ ಪೈಕಿ ಕರ್ನಾಟಕ ಮೂರನೇ ಸ್ಥಾನ ಗಳಿಸಿದ್ದು, ಉತ್ತರ ಪ್ರದೇಶ ಮೊದಲ ಸ್ಥಾನ ಪಡೆದಿದೆ.

ಸೆಪ್ಟೆಂಬರ್ 15ರಿಂದ ಅಕ್ಟೋಬರ್ 2ರ ನಡುವಣ ಅವಧಿಯಲ್ಲಿ ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು, ಅಂದರೆ 3.52 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇದೇ ಅವಧಿಯಲ್ಲಿ ಕರ್ನಾಟಕದಲ್ಲಿ 2,41,708 ಶೌಚಾಲಯಗಳನ್ನು ನಿರ್ಮಿಸಲಾಗಿದೆ.

ರಾಜಸ್ಥಾನ ಎರಡನೇ ಸ್ಥಾನದಲ್ಲಿದ್ದು, 2,54,953 ಶೌಚಾಲಯಗಳನ್ನು ನಿರ್ಮಿಸಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry