ಕಡಲತಡಿಯಲ್ಲಿ ಶವವಾಗಿ ಪತ್ತೆಯಾದ ಬಾಲಕರು

ಬುಧವಾರ, ಜೂನ್ 26, 2019
28 °C

ಕಡಲತಡಿಯಲ್ಲಿ ಶವವಾಗಿ ಪತ್ತೆಯಾದ ಬಾಲಕರು

Published:
Updated:

ಭಟ್ಕಳ: ತಾಲ್ಲೂಕಿನ ಬೇಂಗ್ರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸಸಿಹಿತ್ಲು ಗ್ರಾಮದಿಂದ ಕಾಣೆಯಾಗಿದ್ದ ಇಬ್ಬರು ಬಾಲಕರು ಮಂಗಳವಾರ ಕಾಯ್ಕಿಣಿ ಮಠದ ಹಿತ್ಲು ಕಡಲತೀರದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಗಣೇಶ ಮಾಸ್ತಿ ನಾಯ್ಕ (12) ಹಾಗೂ ವಿನಾಯಕ ನಾಗೇಶ ನಾಯ್ಕ (14) ಮೃತಪಟ್ಟವರು.

ಸೋಮವಾರ ಮಧ್ಯಾಹ್ನ ಸೈಕಲ್‌ನಲ್ಲಿ ಸಮುದ್ರ ತೀರಕ್ಕೆ ತೆರಳಿದ್ದ ಇವರು ಕಾಣೆಯಾಗಿದ್ದರು. ಈ ಬಗ್ಗೆ ಕುಟುಂಬದವರಿಗೆ ರಾತ್ರಿಯವರೆಗೂ ಸುಳಿವು ಸಿಕ್ಕಿರಲಿಲ್ಲ. ಬೆಳಿಗ್ಗೆ ಹುಡುಕಾಟ ನಡೆಸಿದಾಗ ಗ್ರಾಮದ ಬಳಿಯ ಸಮುದ್ರ ತೀರದಲ್ಲಿ ಸೈಕಲ್ ಹಾಗೂ ಪಾದರಕ್ಷೆಗಳು ಪತ್ತೆಯಾಗಿವೆ. ಆನಂತರ ಮಠದಹಿತ್ಲು ಕಡಲತೀರದಲ್ಲಿ ಅವರಿಬ್ಬರ ಮೃತದೇಹಗಳು ಸಿಕ್ಕಿವೆ.

ಬೇಂಗ್ರೆಯ ಉಳ್ಮಣ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗಣೇಶ 6ನೇ ತರಗತಿ ಕಲಿಯುತ್ತಿದ್ದರೆ, ಅಳ್ವೆಕೋಡಿ ದುರ್ಗಾಪರಮೇಶ್ವರಿ ಪ್ರೌಢಶಾಲೆಯಲ್ಲಿ ವಿನಾಯಕ  8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry