ಗುಜರಾತ್‌: ಮೀಸೆ ಬಿಟ್ಟಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ

ಬುಧವಾರ, ಜೂನ್ 19, 2019
23 °C

ಗುಜರಾತ್‌: ಮೀಸೆ ಬಿಟ್ಟಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ

Published:
Updated:
ಗುಜರಾತ್‌: ಮೀಸೆ ಬಿಟ್ಟಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ

ಅಹಮದಾಬಾದ್: ದಲಿತ ಯುವಕ ಮೀಸೆ ಬಿಟ್ಟಿದ್ದಕ್ಕೆ ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಕಳೆದೊಂದು ವಾರದಲ್ಲಿ ಮೂವರು ದಲಿತ ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ.

ಇಲ್ಲಿನ ಲಂಬೋದ್ರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. 17 ವರ್ಷದ ದಲಿತ ಯುವಕ ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಇಬ್ಬರು ಮೇಲ್ಜಾತಿ ಯುವಕರು ದಾರಿಯಲ್ಲಿ ಅಡ್ಡಗಟ್ಟಿ ಥಳಿಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ದಲಿತರ ಮೇಲಿನ ದಾಳಿಗೆ ಆಕ್ರೋಶ ವ್ಯಕ್ತಪಡಿಸಿರುವ ದಲಿತ ನಾಯಕ ಜಿಗ್ನೇಶ್ ಮೇವಾನಿ, ’ರಾಜ್ಯದ ಗೃಹ ಸಚಿವರು ರಾಜೀನಾಮೆ ನೀಡದೇ ಇದ್ದರೆ ದಲಿತರ ಆಕ್ರೋಶ ಗುಜರಾತ್‌ ಅನ್ನು ಭಸ್ಮ ಮಾಡಲಿದೆ’ ಎಂದು ಬೆದರಿಕೆ ಹಾಕಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಮೇವಾನಿ, ಗುಜರಾತ್‌ನಲ್ಲಿ ದಲಿತರು ವಾಸ ಮಾಡುವುದೇ ಕಷ್ಟವಾಗಿದೆ’ ಎಂದು ಹೇಳಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry