ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸಲು ಸಿ.ಎಂ.ಗೆ ವರದಿ

Last Updated 4 ಅಕ್ಟೋಬರ್ 2017, 9:05 IST
ಅಕ್ಷರ ಗಾತ್ರ

ಯಾದಗಿರಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇಲೆ ಗೋವಾದಲ್ಲಿಯ ಕನ್ನಡಿಗರ ಸ್ಥಿತಿಗತಿ ಅಧ್ಯಯನ ನಡೆಸಿದ್ದು, ನಿರಾಶ್ರಿತರಿಗೆ ಕೂಡಲೇ ಪುನರ್ವಸತಿ ಕಲ್ಪಿಸುವಂತೆ ರಾಜ್ಯ ಸರ್ಕಾರಕ್ಕೆ ಮಂಗಳವಾರ ವರದಿ ಸಲ್ಲಿಸಿದ್ದೇನೆ’ ಎಂದು ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ ಚಿಂಚನಸೂರ ‘ಪ್ರಜಾವಾಣಿ’ಗೆ ತಿಳಿಸಿದರು.

‘ಗೋವಾದಲ್ಲಿ ಕನ್ನಡಿಗರ ಸ್ಥಿತಿ ಹೀನಾಯವಾಗಿದೆ. 2004ರಲ್ಲಿ ಅಲ್ಲಿನ ಸ್ಥಳೀಯರು ಕನ್ನಡಿಗರ ಒಟ್ಟು 380 ಮನೆಗಳನ್ನು ಕೆಡವಿದ್ದರು. 2016ರಲ್ಲಿ 300 ಮನೆಗಳನ್ನು, ಪ್ರಸಕ್ತ ವರ್ಷದಲ್ಲಿ 53 ಮನೆಗಳನ್ನು ಕೆಡವಿ ಒಕ್ಕಲೆಬ್ಬಿಸಿದ್ದಾರೆ’ ಎಂದು ಅವರು ಹೇಳಿದರು.

‘ಮನೆಗಳನ್ನು ಕಳೆದುಕೊಂಡಿರುವ ಕನ್ನಡಿಗರು ಗೋವಾದಲ್ಲಿ ನಿರಾಶ್ರಿತರಾಗಿದ್ದಾರೆ. ರಾಜ್ಯ ಮನವಿ ಮಾಡಿಕೊಂಡರೂ ಗೋವಾ ಸರ್ಕಾರ ಕನ್ನಡಿಗರಿಗೆ ಯಾವುದೇ ಪುನರ್ವಸತಿ ಕಲ್ಪಿಸಿಲ್ಲ. ಕೂಡಲೇ ರಾಜ್ಯ ಸರ್ಕಾರ ಗೋವಾ ಕನ್ನಡಿಗರಿಗೆ ಪುನರ್ವತಿ ಕಲ್ಪಿಸಲು ಮುಂದಾಗಬೇಕು ಎಂಬುದಾಗಿ ವರದಿಯಲ್ಲಿ ಶಿಫಾರಸು ಮಾಡಲಾಗಿದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT