'ಒಬಿಒಆರ್’: ಭಾರತದ ಆಕ್ಷೇಪಕ್ಕೆ ಅಮೆರಿಕ ಬೆಂಬಲ

ಸೋಮವಾರ, ಜೂನ್ 17, 2019
31 °C

'ಒಬಿಒಆರ್’: ಭಾರತದ ಆಕ್ಷೇಪಕ್ಕೆ ಅಮೆರಿಕ ಬೆಂಬಲ

Published:
Updated:
'ಒಬಿಒಆರ್’: ಭಾರತದ ಆಕ್ಷೇಪಕ್ಕೆ ಅಮೆರಿಕ ಬೆಂಬಲ

ವಾಷಿಂಗ್ಟನ್: ಚೀನಾದ ಮಹತ್ವಾಕಾಂಕ್ಷಿ ಯೋಜನೆಯಾದ ’ಒನ್ ಬೆಲ್ಟ್ ಒನ್ ರೋಡ್‌’ ಯೋಜನೆಗೆ ಸಂಬಂಧಿಸಿದಂತೆ ಭಾರತ ವ್ಯಕ್ತಪಡಿಸಿರುವ ಆಕ್ಷೇಪಗಳಿಗೆ ಅಮೆರಿಕ ಬೆಂಬಲ ವ್ಯಕ್ತಪಡಿಸಿದೆ.

ಈ ಯೋಜನೆ ವಿವಾದಿತ ಗಡಿ ಪ್ರದೇಶದಲ್ಲಿ ಹಾದು ಹೋಗುತ್ತದೆ. ಹೀಗಾಗಿ, ಭಾರತ ಕೈಗೊಂಡಿರುವ ನಿಲುವು ಸರಿಯಾಗಿದೆ ಎಂದು ಅಮೆರಿಕ ಅಭಿಪ್ರಾಯಪಟ್ಟಿದೆ.

ಕಳೆದ ಮೇ ತಿಂಗಳಲ್ಲಿ ನಡೆದ ಬೆಲ್ಟ್‌ ಮತ್ತು ರೋಡ್‌ ಫೋರಂ (ಬಿಆರ್‌ಎಫ್‌) ಸಮಾವೇಶದಲ್ಲಿ ಭಾರತ ಪಾಲ್ಗೊಂಡಿರಲಿಲ್ಲ. ಭಾರತದ ಸಾರ್ವಭೌಮತೆಗೆ ಧಕ್ಕೆಯಾಗಲಿದೆ ಎನ್ನುವ ಆತಂಕವನ್ನು ಭಾರತ ಈ ಸಂದರ್ಭದಲ್ಲಿ ವ್ಯಕ್ತಪಡಿಸಿತ್ತು.

ಈ ವಿಷಯದ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್ ಅವರು, 'ಒನ್‌ ಬೆಲ್ಟ್‌ ಮತ್ತು ಒನ್‌ ರೋಡ್‌ ಯೋಜನೆ ವಿವಾದಿತ ಪ್ರದೇಶದಲ್ಲಿ ಕೈಗೊಳ್ಳಲಾಗಿದೆ. ಈ ರೀತಿ ವಿವಾದಗಳಿದ್ದಾಗ ಸರ್ವಾಧಿಕಾರ ಧೋರಣೆಯಿಂದ ಯೋಜನೆಯನ್ನು ಅನುಷ್ಠಾನಗೊಳಿಸಬಾರದು’ ಎಂದು ಅವರು ಹೇಳಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry