ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಲಾಸ್ಟಿಕ್‌ ಬಳಕೆಗೆ ಇನ್ನೂ ಬಿದ್ದಿಲ್ಲ ಕಡಿವಾಣ

Last Updated 4 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರ ಒಂದೂವರೆ ವರ್ಷದ ಹಿಂದೆಯೇ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದ್ದರೂ ನಗರದಲ್ಲಿ ಮಾತ್ರ ಇದುವರೆಗೂ ಪ್ಲಾಸ್ಟಿಕ್‌ ಮಾರಾಟಕ್ಕೆ ಕಡಿವಾಣ ಬಿದ್ದಿಲ್ಲ.

ಸೂಪರ್‌ ಮಾರ್ಕೆಟ್‌ಗಳು, ರೆಸ್ಟೋರೆಂಟ್‍ಗಳು, ಹೋಟೆಲ್‍ಗಳು, ದಿನಸಿ ಅಂಗಡಿಗಳು, ಚಿಲ್ಲರೆ ಅಂಗಡಿಗಳು, ಮಾರುಕಟ್ಟೆಗಳು, ಔಷಧದ ಅಂಗಡಿ, ಬೇಕರಿಗಳು, ರಸ್ತೆ ಬದಿಯ ತಳ್ಳು ಗಾಡಿಗಳಲ್ಲೂ ಪ್ಲಾಸ್ಟಿಕ್ ಕವರ್‌, ಪ್ಲಾಸ್ಟಿಕ್‌ ಕೈಚೀಲಗಳ ಬಳಕೆ ಮಿತಿಮೀರಿದೆ.

ಪ್ಲಾಸ್ಟಿಕ್‌ ಬಳಕೆ ತಡೆಗಟ್ಟಲು ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ, ದಂಡ ವಿಧಿಸಿದರೂ ಪ್ಲಾಸ್ಟಿಕ್ ತಯಾರಕರು ಮತ್ತು ಮಾರಾಟಗಾರರು ಇದಕ್ಕೆ ಸೊಪ್ಪು ಹಾಕುತ್ತಿಲ್ಲ. ಬಳಸಿ ಬಿಸಾಡುವ ಪ್ಲಾಸ್ಟಿಕ್‌ನಿಂದಾಗಿ ರಸ್ತೆ ಬದಿ, ಖಾಲಿ ನಿವೇಶನ, ಚರಂಡಿಗಳು ಪ್ಲಾಸ್ಟಿಕ್‌ ತ್ಯಾಜ್ಯಮಯವಾಗಿವೆ.

‘ಪ್ಲಾಸ್ಟಿಕ್‌ ತಯಾರಕರಿಗೆ ತೆರಿಗೆ ರಿಯಾಯಿತಿ ನೀಡುವುದು, ಪ್ಲಾಸ್ಟಿಕ್‌ ಚಿಂದಿ ಆಯುವವರರಿಗೆ ಶೇ 18 ಜಿಎಸ್‌ಟಿ ಹೇರುವುದು ಸರ್ಕಾರದ ನೀತಿ
ಯಾಗಿದೆ. ಇಂಥ ಇಬ್ಬಗೆಯ ನೀತಿ ಅನುಸರಿಸಿದರರೆ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಲು ಸಾಧ್ಯವೇ’ ಎಂದು ಪ್ರಶ್ನಿಸುತ್ತಾರೆ ಎನ್ವಿರಾನ್‌ಮೆಂಟ್‌ ಸಫೋರ್ಟ್‌ (ಇಎಸ್‌ಜಿ) ಗ್ರೂಪ್‌ ಸಂಚಾಲಕ ಲಿಯೊ ಸಲ್ಡಾನ.

ಪಾಲಿಕೆ ಅಧಿಕಾರಿಯೊಬ್ಬರು ಹೇಳುವ ಪ್ರಕಾರ, ನಗರದಲ್ಲಿ ಪ್ರತಿ ದಿನ ಸುಮಾರು 600ರಿಂದ 700 ಟನ್‌ ಪ್ಲಾಸ್ಟಿಕ್‌ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಮನೆಗಳಲ್ಲಿ ಕಸ ವಿಂಗಡಣೆಯೂ ಸರಿಯಾಗಿ ಆಗುತ್ತಿಲ್ಲ. ಪ್ಲಾಸ್ಟಿಕ್‌ ತ್ಯಾಜ್ಯ ಚರಂಡಿ, ಕೆರೆ, ಕಾಲುವೆಗಳ ಒಡಲು ಸೇರಿ ಪರಿಸರ ಮಾಲಿನ್ಯಕ್ಕೂ ಕಾರಣವಾಗುತ್ತಿದೆ.

ರಾಜ್ಯ ಸರ್ಕಾರ 2016ರ ಮಾರ್ಚ್‌ 11ರಿಂದ ಜಾರಿಗೆ ಬರುವಂತೆ ಪ್ಲಾಸ್ಟಿಕ್ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಇದರ ಪ್ರಕಾರ ಪ್ಲಾಸ್ಟಿಕ್‌ ಉತ್ಪನ್ನಗಳ ತಯಾರಿಕೆ, ಸಾಗಾಣಿಕೆ, ಸಂಗ್ರಹಣೆ ಮತ್ತು ಮಾರಾಟ ಮಾಡುವಂತಿಲ್ಲ. ಕಾನೂನು ಉಲ್ಲಂಘಿಸಿದವರಿಗೆ 3ರಿಂದ 6 ತಿಂಗಳು ಜೈಲು ಶಿಕ್ಷೆ, ₹5,000ದಿಂದ ₹1 ಲಕ್ಷದವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಪರಿಸರ ಸಂರಕ್ಷಣೆ ಕಾಯ್ದೆ 1986ರ ಸೆಕ್ಷನ್ 19ರಡಿಯೂ ಅವಕಾಶ ಕಲ್ಪಿಸಿದೆ.

ಆದರೂ, ನಗರದ ಹೃದಯ ಭಾಗದಲ್ಲಿರುವ ಕಾರ್ಖಾನೆಗಳಲ್ಲಿ ಪ್ಲಾಸ್ಟಿಕ್ ಮತ್ತು ಪ್ಲಾಸ್ಟಿಕ್‌ ಉತ್ಪನ್ನಗಳ ತಯಾರಿಕೆ ಮಾತ್ರ ರಾಜಾರೋಷವಾಗಿ ನಡೆಯುತ್ತಿದೆ. ಹೊರ ರಾಜ್ಯಗಳಿಂದಲೂ ನಗರಕ್ಕೆ ಪ್ಲಾಸ್ಟಿಕ್ ಕೈಚೀಲ ಮತ್ತು ಪ್ಲಾಸ್ಟಿಕ್‌ ಉತ್ಪನ್ನಗಳ ಪೂರೈಕೆ ದೊಡ್ಡ ಪ್ರಮಾಣ
ದಲ್ಲಿ ನಡೆಯುತ್ತಿದೆ.

'ಪ್ಲಾಸ್ಟಿಕ್‌ ನಿಷೇಧ ಕಾಯ್ದೆ ಜಾರಿಗೊಳಿಸಬೇಕಾದ ಬಿಬಿಎಂಪಿ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದ ಕಾರಣಕ್ಕೆ ಪ್ಲಾಸ್ಟಿಕ್‌ ಉತ್ಪನ್ನಗಳ ತಯಾರಿಕೆ, ಮಾರಾಟ ಮತ್ತು ಸಾಗಣೆ ಎಗ್ಗಿಲ್ಲದೆ ನಡೆಯುತ್ತಿದೆ’ ಎಂದರು.

‘ಶೇ 90ರಷ್ಟು ಪಾನೀಯ ಮತ್ತು ಆಹಾರ ಪದಾರ್ಥಗಳ ಪೊಟ್ಟಣಗಳನ್ನು ಕಟ್ಟಲು ಪ್ಲಾಸ್ಟಿಕ್‌ ಬಳಸಲಾಗುತ್ತಿದೆ’ ಎಂದು ಸಲ್ಡಾನ ಆತಂಕ ವ್ಯಕ್ತಪಡಿಸುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT