ಎಚ್‌ಡಿಕೆ ಮನೆಯಲ್ಲಿ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ

ಶನಿವಾರ, ಮೇ 25, 2019
32 °C

ಎಚ್‌ಡಿಕೆ ಮನೆಯಲ್ಲಿ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ

Published:
Updated:

ಹುಬ್ಬಳ್ಳಿ: ಇಲ್ಲಿನ ಮಾಯಕಾರ ಕಾಲೊನಿಯಲ್ಲಿರುವ ಜೆಡಿಎಸ್‌ ರಾಜ್ಯ ಘಟಕ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರ ಬಾಡಿಗೆ ಮನೆಯಲ್ಲಿ ಮಂಗಳವಾರ ಮಧ್ಯರಾತ್ರಿ ಶಾರ್ಟ್‌ ಸರ್ಕಿಟ್‌ನಿಂದ ಎರಡು ಸೋಫಾ ಮತ್ತು ಬೆಲೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

‘ಸ್ವಿಚ್‌ ಬೋರ್ಡ್‌ನಲ್ಲಿ ಶಾರ್ಟ್‌ ಸರ್ಕಿಟ್‌ ಉಂಟಾಗಿದ್ದರಿಂದ ಬೆಂಕಿಯ ಕಿಡಿ ಸೋಫಾ ಸೆಟ್‌ ಮೇಲೆ ಬಿದ್ದು ಅದು ಹೊತ್ತಿಕೊಂಡಿದೆ. ಕೊಠಡಿಯಿಂದ ಹೊಗೆ ಬರುತ್ತಿದ್ದನ್ನು ಗಮನಿಸಿದ ಪೊಲೀಸರು ಮತ್ತು ಕೆಲಸಗಾರರು ಕೂಡಲೇ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಈ ಸಂಬಂಧ ದೂರು ದಾಖಲಾಗಿಲ್ಲ’ ಎಂದು ಎಪಿಎಂಸಿ ನವನಗರ ಠಾಣೆ ಇನ್‌ಸ್ಪೆಕ್ಟರ್‌ ಎಸ್‌.ಆರ್‌. ನಾಯಕ ತಿಳಿಸಿದರು.

ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆ ಮಾಡುವ ಸಲುವಾಗಿ 11 ತಿಂಗಳ ಹಿಂದೆ ಕುಮಾರಸ್ವಾಮಿ ಇಲ್ಲಿ ಮನೆ ಮಾಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry