ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸಲವಾಡ ಕೆರೆ ತುಂಬಿಸುವ ಕಾಮಗಾರಿಗೆ ಚಾಲನೆ

Last Updated 5 ಅಕ್ಟೋಬರ್ 2017, 5:37 IST
ಅಕ್ಷರ ಗಾತ್ರ

ಹೂವಿನಹಡಗಲಿ : ತಾಲ್ಲೂಕಿನ ಮಾನ್ಯರಮಸಲವಾಡ ಗ್ರಾಮದ ಕೆರೆ ತುಂಬಿಸುವ ಕಾಮಗಾರಿಗೆ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಬುಧವಾರ ಭೂಮಿಪೂಜೆ ನೆರವೇರಿಸಿದರು.

ನಂತರ ಗ್ರಾಮದಲ್ಲಿ ಆಯೋಜಿಸಿದ್ದ ‘ಮನೆ ಮನೆಗೆ ಕಾಂಗ್ರೆಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ‘ಕಾಂಗ್ರೆಸ್‌ ಸರ್ಕಾರ ಅನುಷ್ಠಾನಗೊಳಿಸಿದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕು’ ಎಂದರು.

‘ನಾಲ್ಕುವರೆ ವರ್ಷದಲ್ಲಿ ಕ್ಷೇತ್ರದ ಸಮಗ್ರ ಪ್ರಗತಿಗೆ ಶ್ರಮಿಸಿದ್ದೇನೆ. ಅಭಿವೃದ್ಧಿ ಕೆಲಸಗಳನ್ನು ಪ್ರೋತ್ಸಾಹಿಸಿದರೆ ಇನ್ನೂ ಹೆಚ್ಚಿನ ಕೆಲಸ ಮಾಡಲು ಪ್ರೇರಣೆಯಾಗುತ್ತದೆ. ಮಾನ್ಯರಮಸಲವಾಡ ಗ್ರಾಮದ ರಥಬೀದಿಯ ಅಭಿವೃದ್ಧಿಗೆ ₨ 80 ಲಕ್ಷ, ಗ್ರಂಥಾಲಯಕ್ಕೆ ₨20 ಲಕ್ಷ, ಶಾಲಾ ಕೊಠಡಿಗಳ ನಿರ್ಮಾಣಕ್ಕೆ ₨ 64 ಲಕ್ಷ, ಹಿರೇಹಳ್ಳಕ್ಕೆ ಸೇತುವೆ ನಿರ್ಮಿಸಲು ₨3 ಕೋಟಿ ಅನುದಾನ ಮಂಜೂರಾಗಿದೆ’ ಎಂದು ತಿಳಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಬರೀ ಮಾತಿನಿಂದ ಜನರನ್ನು ಮೋಡಿ ಮಾಡುತ್ತಿದ್ದಾರೆ. ಚುನಾವಣಾ ಪೂರ್ವದಲ್ಲಿ ರೈತರು, ಯುವಕರು, ಮಹಿಳೆಯರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸದೇ ದಿಕ್ಕು ತಪ್ಪಿಸುವ ಮೂಲಕ ದೇಶದ ಜನರಿಗೆ ಅಪಮಾನ ಮಾಡಿದ್ದಾರೆ’ ಎಂದು ಟೀಕಿಸಿದರು.

ಮುಖಂಡರಾದ ಐಗೋಳ ಚಿದಾನಂದ, ಎಂ.ಪರಮೇಶ್ವರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶಿವಯೋಗಿ, ಕಾರ್ಯಕ್ರಮ ಉಸ್ತುವಾರಿ ಬೆಣಕಲ್ ಬಸವರಾಜ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸೋಗಿ ಹಾಲೇಶ್, ಸದಸ್ಯೆ ಶ್ವೇತಾಬಾಯಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗಿಬಾಯಿ, ಎಪಿಎಂಸಿ ಅಧ್ಯಕ್ಷ ಸೊಪ್ಪಿನ ಪ್ರಕಾಶ, ಮುಖಂಡರಾದ ವಾರದ ಗೌಸ್ ಮೊಹಿದ್ದೀನ್, ಅಟವಾಳಗಿ ಕೊಟ್ರೇಶ, ಬಿ.ಹನುಮಂತಪ್ಪ, ಟಿ.ಲಾಲ್ಯಾನಾಯ್ಕ, ಬಸವನಗೌಡ ಪಾಟೀಲ್, ಬಸಣ್ಣ, ಬಿದರಹಳ್ಳಿ ಕೊಟ್ರೇಶ, ಯುವ ಕಾಂಗ್ರೆಸ್ ಅಧ್ಯಕ್ಷ ಗಡಿಗಿ ಕೃಷ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT