ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಗ್ರ ಕೃಷಿಯಿಂದ ಲಾಭ: ಬಿ.ಎಂ.ನಾಗರಾಜ

ಹಳೇಕೋಟೆಯಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ
Last Updated 5 ಅಕ್ಟೋಬರ್ 2017, 5:54 IST
ಅಕ್ಷರ ಗಾತ್ರ

ಸಿರುಗುಪ್ಪ : ‘ಸಮಗ್ರ ಕೃಷಿ ಪದ್ಧತಿಯನ್ನು ರೈತರು ಅಳವಡಿಸಿಕೊಂಡಾಗ ಮಾತ್ರ ಕೃಷಿಯಲ್ಲಿ ಯಶಸ್ಸು ಪಡೆಯಲು ಸಾಧ್ಯ’ ಎಂದು ಶಾಸಕ ಬಿ.ಎಂ.ನಾಗರಾಜ ಹೇಳಿದರು.

ತಾಲ್ಲೂಕಿನ ಹಳೇಕೋಟೆ ಗ್ರಾಮದಲ್ಲಿ ಮರಿಸ್ವಾಮಿ ಮಠದಲ್ಲಿ ಮಂಗಳವಾರ ರಾಯಚೂರು ಕೃಷಿ ವಿಶ್ವವಿದ್ಯಾಲಯದ ಅಂತಿಮ ವರ್ಷದ ಕೃಷಿ ಬಿ.ಎಸ್ಸಿ ವಿದ್ಯಾರ್ಥಿಗಳಿಗಾಗಿ ‘ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ’ವನ್ನು ಉದ್ಘಾಟಿಸಿ ಮಾತನಾಡಿದರು

 ವಿದ್ಯಾರ್ಥಿಗಳ ತಮ್ಮ ಸಂಶೋಧನೆಗಳನ್ನು ರೈತರೊಂದಿಗೆ ಹಂಚಿಕೊಳ್ಳಬೇಕು. ಇದರಿಂದ ರೈತರಿಗೆ ಆಗುವಂತ ನಷ್ಟವನ್ನು ತಪ್ಪಿಸಬಹುದು’ ಎಂದರು.

ಸಿರುಗುಪ್ಪ ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ಬಸವಣ್ಣೆಪ್ಪ ಮಾತನಾಡಿ, ‘ಹಿಂಗಾರು ಹಂಗಾಮಿನಲ್ಲಿ ರೈತರು ಮೆಕ್ಕೆಜೋಳ, ಕಡಲೆ, ಹೈಬ್ರೈಡ್‌ಜೋಳ, ಕುಸುಬೆ, ತರಕಾರಿಗಳ ಬೆಳೆಗಳಾದ ಟೋಮಟ, ನುಗ್ಗೆ, ಚೆಂಡು ಹೂ, ಮೆಣಸಿನಕಾಯಿ ಬೆಳೆಯಯನ್ನು ಬೆಳೆಯಬಹುದು. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.

ಇದೇ ವೇಳೆಯಲ್ಲಿ ಕೃಷಿ ಪದ್ಧತಿಗಳ ಕುರಿತು ಪ್ರಾತ್ಯಕ್ಷಿತೆ ಹಾಗೂ ವಸ್ತು ಪ್ರದರ್ಶನವನ್ನು ಶಾಸಕ ಬಿ.ಎಂ.ನಾಗರಾಜ ಉದ್ಘಾಟಿಸಿದರು. ಬಳಿಕ ಮಾಹಿತಿಯನ್ನು ಪಡೆದುಕೊಂಡರು.

ಮರಿಸ್ವಾಮಿ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ರಾಯಚೂರು ಕೃಷಿ ವಿಶ್ವವಿದ್ಯಾಲಯದ ಮುಖ್ಯಸ್ಥ ಡಾ.ಎ.ಎಸ್‌.ಹಳೇಪ್ಯಾಟೆ, ಸಹಾಯಕ ಕೃಷಿ ನಿರ್ದೇಶಕ ಪಾಲಕ್ಷಿಗೌಡ, ಕೃಷಿ ವಿಜ್ಞಾನಿಗಳಾದ ಡಾ.ಎ.ಜಿ.ಶ್ರೀನಿವಾಸ, ಡಾ,ಅಮರೇಶ, ಡಾ.ಅಮರೇಗೌಡ, ಶಿವಾನಂದಕಮ್ಮರ, ಜೈನುದ್ದಿನ್, ಜಿಲ್ಲಾ ಪಂಚಾಯಿತಿ ಸದಸ್ಯೆ ಎಚ್‌.ಸಿ.ರಾಧ ಧರಪ್ಪನಾಯಕ, ಪ್ರಗತಿಪರ ರೈತರಾದ ಶಾಂತನಗೌಡ, ಗುರುಸಿದ್ಧನಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT