ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಷನ್ ಡಾಕ್ಯುಮೆಂಟ್ ಪೂರ್ವಭಾವಿ ಸಭೆ

Last Updated 5 ಅಕ್ಟೋಬರ್ 2017, 6:21 IST
ಅಕ್ಷರ ಗಾತ್ರ

ಚಾಮರಾಜನಗರ: ರಾಜ್ಯ ಸರ್ಕಾರದ ವಿಷನ್ -2025 ಡಾಕ್ಯುಮೆಂಟ್ ನೀಲನಕ್ಷೆ ತಯಾರಿಸುವ ಸಂಬಂಧ ಸಾಮಾಜಿಕ ನ್ಯಾಯ, ಆರೋಗ್ಯ ಮತ್ತು ಶಿಕ್ಷಣ ಕುರಿತು ಅಭಿಪ್ರಾಯ ಸಂಗ್ರಹಿಸುವ ಪೂರ್ವಭಾವಿ ಸಭೆ ನಡೆಯಿತು.

ನಗರದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಸಮಾಜ ಕಲ್ಯಾಣ, ಶಿಕ್ಷಣ, ಆರೋಗ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಸಮಗ್ರ ಬೆಳವಣಿಗೆ ಕುರಿತು ನಾಗರಿಕರಿಂದ ಅಭಿಪ್ರಾಯ, ಅನಿಸಿಕೆ ಹಾಗೂ ಸಲಹೆಗಳನ್ನು ಪಡೆದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೆ.ಎಚ್. ಸತೀಶ್ ಮಾತನಾಡಿ, ಮುಂದಿನ ಏಳು ವರ್ಷಗಳಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಯಲ್ಲಿರಿಸಿಕೊಂಡು ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಬದಲಾವಣೆ, ಸಮಾನತೆ, ತಾರತಮ್ಯ ನಿವಾರಣೆ, ಆರೋಗ್ಯ, ವಸತಿ ಮತ್ತು ಶೈಕ್ಷಣಿಕ ಅಂತರಗಳನ್ನು ಕಡಿಮೆ ಮಾಡಲು ಸಾರ್ವಜನಿಕ ಅಭಿಪ್ರಾಯ ಕಲೆ ಹಾಕಲಾಗುತ್ತಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್. ಪ್ರಸಾದ್ ಮಾತನಾಡಿ, ಪ್ರತಿಯೊಂದು ಅಭಿವೃದ್ಧಿಶೀಲ ದೇಶಗಳು ಯೋಜನೆಗಳ ಪ್ರಗತಿ ನಿರ್ಧರಿಸಲು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತವೆ. ಜನರ ಅನಿಸಿಕೆಗಳ ಸಾರಾಂಶ, ಸ್ಪಂದನೆ, ನಿರ್ಧಾರ, ಸಲಹೆಗಳನ್ನು ಕ್ರೋಡೀಕರಿಸಿ ಅಭಿವೃದ್ಧಿಗಾಗಿ ಮುಂದಿನ ಯೋಜನೆ ರೂಪಿಸುವುದರಿಂದ ಇಂತಹ ವಿಷನ್ ಡಾಕ್ಯುಮೆಂಟ್ ಅಗತ್ಯವಾಗಿದೆ ಎಂದರು.

ಜನಪ್ರತಿನಿಧಿಗಳು, ಧಾರ್ಮಿಕ ನಾಯಕರು, ಬುದ್ಧಿಜೀವಿಗಳು, ವಿವಿಧ ಸಂಘಸಂಸ್ಥೆಯ ಪದಾಧಿಕಾರಿಗಳು, ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಸಾರ್ವಜನಿಕರು ಸಭೆಗೆ ಹಾಜರಾಗಿ ರಾಜ್ಯಸರ್ಕಾರದ ಯೋಜನೆಗಳ ಅನುಷ್ಠಾನ, ಅವುಗಳ ಪ್ರಸ್ತುತತೆ, ಅಗತ್ಯ ಮಾರ್ಪಾಡು, ಜನರನ್ನು ತಲುಪುವ ಬಗೆ ಹಾಗೂ ವಿವಿಧ ಅಭಿವೃದ್ಧಿ ಕ್ಷೇತ್ರಗಳಲ್ಲಿ ಆಗಬೇಕಾಗಿರುವ ಬದಲಾವಣೆಯನ್ನು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಪಿ. ಸದಾಶಿವಮೂರ್ತಿ, ಸದಸ್ಯ ಸಿ.ಎನ್. ಬಾಲರಾಜು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ವಿ. ಚಂದ್ರು, ಶಿಕ್ಷಣ ತಜ್ಞ ಜಿ.ಎಸ್. ಜಯದೇವ್, ಸಾಹಿತಿ ಸೋಮಶೇಖರ ಬಿಸಲ್ವಾಡಿ, ಪ್ರಗತಿಪರ ಸಂಘಟನೆ ಮುಖಂಡರಾದ ಅರಕಲವಾಡಿ ನಾಗೇಂದ್ರ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಕೇತಮ್ಮ, ಬೌದ್ಧ ಬಿಕ್ಕು ಬಂತೇಜಿ, ಸಾರ್ವಜನಿಕರು, ವಿವಿಧ ಶಾಲಾ ವಿದ್ಯಾರ್ಥಿಗಳು ಅನಿಸಿಕೆಗಳನ್ನು ತಿಳಿಸಿದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಮಂಜುಳಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ರಜಿನಾ ಪಿ. ಮಲಾಕಿ, ಖಾದಿ ಗ್ರಾಮೋದ್ಯೋಗ ಅಧಿಕಾರಿ ರಾಜೇಂದ್ರ ಪ್ರಸಾದ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕೃಷ್ಣಯ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT