ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧೀಜಿಯವರ ಆದರ್ಶಗಳನ್ನು ಪಾಲಿಸಿ

Last Updated 5 ಅಕ್ಟೋಬರ್ 2017, 8:29 IST
ಅಕ್ಷರ ಗಾತ್ರ

ಹಂಸಭಾವಿ: ‘ಶಾಂತಿ ಮತ್ತು ಅಹಿಂಸೆಯ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧೀಜಿಯವರ ತತ್ವಾದರ್ಶಗಳನ್ನು ನಮ್ಮ  ಜೀವನದಲ್ಲಿ ರೂಢಿಸಿಕೊಳ್ಳಬೇಕು’ ಎಂದು ಮುಖ್ಯ ಶಿಕ್ಷಕ ಎಂ.ಕೆ.ಸುಂಕದ ಹೇಳಿದರು.

ಇಲ್ಲಿನ ಸಮೀಪದ ಲಿಂಗಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ‘ಗಾಂಧಿ ಜಯಂತಿ’ಯಲ್ಲಿ ಅವರು ಮಾತನಾಡಿದರು.

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಾಲತೇಶ ಅಗಸೀಬಾಗಿಲ ಮಾತನಾಡಿ, ‘ಮಾನವೀಯ ಮೌಲ್ಯಗಳು ಇಂದಿನ ಯುವ ಪೀಳಿಗೆಯಲ್ಲಿ ಮಾಯವಾಗುತ್ತಿರುವುದು ವಿಷಾದನೀಯ’ ಎಂದರು.

ಗಾಂಧಿ ಜಯಂತಿ ನಿಮಿತ್ತ ಶಾಲಾ ಮಕ್ಕಳು ಗ್ರಾಮದ ಬೀದಿಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಂಡರು.

ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ದಿಳ್ಳೆಪ್ಪ ಜಡಿಯಣ್ಣನವರ, ಮಲ್ಲೇಶಪ್ಪ ಮುದಕಣ್ಣನವರ, ಗ್ರಾಮ ಪಂಚಾಯ್ತಿ ಸದಸ್ಯೆ ಗೌರವ್ವ ಮುದಕಣ್ಣನವರ, ಶಿಕ್ಷಕರಾದ ಆರ್.ಜಿ.ಚಿಕ್ಕಣ್ಣನವರ, ಆರ್.ಎಸ್.ವಾಲಿ, ಸುನೀತಾ ಎನ್.ಕೆ., ಕೆ.ಬಿ.ಕಟ್ಟಿಮನಿ ಹಾಗೂ ಸಂತೋಷ ಪಿ. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT