ಮಲೆ ಮಹದೇಶ್ವರ ಹುಂಡಿಯಲ್ಲಿ ₹1.06 ಕೋಟಿ ಸಂಗ್ರಹ

ಮಂಗಳವಾರ, ಜೂನ್ 18, 2019
23 °C

ಮಲೆ ಮಹದೇಶ್ವರ ಹುಂಡಿಯಲ್ಲಿ ₹1.06 ಕೋಟಿ ಸಂಗ್ರಹ

Published:
Updated:
ಮಲೆ ಮಹದೇಶ್ವರ ಹುಂಡಿಯಲ್ಲಿ ₹1.06 ಕೋಟಿ ಸಂಗ್ರಹ

ಮಲೆಮಹದೇಶ್ವರ ಬೆಟ್ಟ: ಮಲೆ ಮಹದೇಶ್ವರ ಬೆಟ್ಟದ ದೇವಾಲಯದ ಹುಂಡಿಗಳಲ್ಲಿ ಕಳೆದ 30 ದಿನಗಳಲ್ಲಿ ₹1,06,47,641 ಹಣ ಸೇರಿದಂತೆ 53 ಗ್ರಾಂ ಚಿನ್ನ, 650 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

ಸಾಲೂರು ಮಠಾಧೀಶ ಗುರುಸ್ವಾಮಿ ನೇತೃತ್ವದಲ್ಲಿ ಮಂಗಳವಾರ ಹುಂಡಿ ಎಣಿಕೆ ಕಾರ್ಯವನ್ನು ನಡೆಸಲಾಯಿತು.

ಹುಂಡಿಗಳನ್ನು ಗುರುಸ್ವಾಮಿಗಳ ನೇತೃತ್ವದಲ್ಲಿ ದೇವಾಲಯದಲ್ಲಿ ಪರ್ಕಾವಣೆ ಮಾಡಿ ಅಲ್ಲಿಂದ ಪೊಲೀಸರ ಸಹಕಾರದೊಂದಿಗೆ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣದ ಮೇಲ್ಮಹಡಿಗೆ ಕೊಂಡೊಯ್ದು ಎಣಿಕೆ ಕಾರ್ಯ ನಡೆಸಲಾಯಿತು.

ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಾಯತ್ರಿ, ಪ್ರಭಾರ ನಿರ್ವಾಹಕ ಅಧಿಕಾರಿ ಬಸವರಾಜು, ಸೂಪರಿಂಟೆಂಡೆಂಟ್‌ ಮಾದರಾಜು, ಭಾರತೀಯ ಸ್ಟೇಟ್ ಬ್ಯಾಂಕ್ ವ್ಯವಸ್ಥಾಪಕ ಸೆಂದಿಲ್‌ನಾದನ್ ದೇವಾಲಯದ ಹಾಗೂ ಬ್ಯಾಂಕ್‌ ಸಿಬ್ಬಂದಿ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry