‘ಧಾರ್ಮಿಕ ಕಾರ್ಯಕ್ರಮಗಳಿಂದ ನೆಮ್ಮದಿ’

ಗುರುವಾರ , ಜೂನ್ 20, 2019
24 °C

‘ಧಾರ್ಮಿಕ ಕಾರ್ಯಕ್ರಮಗಳಿಂದ ನೆಮ್ಮದಿ’

Published:
Updated:

ಮಸ್ಕಿ: ಧಾರ್ಮಿಕ ಕಾರ್ಯಕ್ರಮಗಳಿಂದ ಮನಸ್ಸಿನ ಶುದ್ಧಿ ಸಾಧ್ಯ ಎಂದು ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪುರ ಇಲ್ಲಿ ಹೇಳಿದರು.

ನವರಾತ್ರಿ ನಿಮಿತ್ತ ಪಟ್ಟಣದ ಭ್ರಮರಾಂಬ ದೇವಸ್ಥಾನದಲ್ಲಿ ಈಚೆಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದಿನ ಯುವ ಜನಾಂಗ ನಮ್ಮ ಸಂಸ್ಕೃತಿಯನ್ನು ನಮ್ಮ ಸಂಸ್ಕೃತಿಯನ್ನು ಮರೆಯುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸಂಸ್ಕೃತಿ, ಆಚರಣೆಗಳು ಜೀವಂತವಾಗಿ ಉಳಿದಿವೆ ಎಂದು ಹೇಳಿದರು.

ಯುವಕರು ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸಬೇಕು. ಆ ಮೂಲ ಉತ್ತಮ ಸಂಸ್ಕಾರ ಅಳವಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಬಾಗಲಕೋಟೆಯ ಕೃಷ್ಣಾನಂದ ಶಾಸ್ತ್ರಿ ಮಾತನಾಡಿದರು. ಗಚ್ಚಿನಮಠದ ವರರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಶಾಸಕ ಪ್ರತಾಪಗೌಡ ಪಾಟೀಲ, ಕೆ. ವೀರನಗೌಡ, ಮಹಾದೇವಪ್ಪಗೌಡ ಪೊಲೀಸ್ ಪಾಟೀಲ ಇದ್ದರು. ಮಹಾಂತೇಶ ಬ್ಯಾಳಿ ನಿರೂಪಿಸಿದರು

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry