ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಕರ್ಮ ಸಮಾಜ ರಾಜಕೀಯ ಶಕ್ತಿಯಾಗಲಿ

ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಹಾಗೂ ಪದಾಧಿಕಾರಗಳ ಸಭೆ
Last Updated 5 ಅಕ್ಟೋಬರ್ 2017, 10:09 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ’ವಿಶ್ವಕರ್ಮ ಸಮಾಜ ರಾಜಕೀಯ ಶಕ್ತಿಯಾಗಿ ಬೆಳೆಯಬೇಕು. ಸಾಂಘಿಕ ಪ್ರಯತ್ನದ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕು’ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಕಲಾವಿದ ವಿಷ್ಣು ಹೇಳಿದರು.

ಪಟ್ಟಣದಲ್ಲಿ ಬುಧವಾರ ಏರ್ಪ ಡಿಸಿದ್ದ ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ವಿಶ್ವಕರ್ಮ ಸಮಾಜವನ್ನು ನಿರ್ಲಕ್ಷಿಸಿದೆ. ಈ ಸಮುದಾಯದ ಮುಖಂಡ ಕೆ.ಪಿ.ನಂಜುಂಡಿ ಅವರನ್ನು ಮೂಲೆ ಗುಂಪು ಮಾಡುವುದರ ಮೂಲಕ, ಸಮುದಾ ಯದ ಬೇಡಿಕೆ ನಿರ್ಲಕ್ಷಿಸಿದೆ. ಅದಕ್ಕಾಗಿ ಕೆ.ಪಿ.ನಂಜುಂಡಿ ಅವರು ಪಕ್ಷ ನಿಷ್ಠೆಯನ್ನು ಬದಲಾಯಿಸಬೇಕಾಯಿತು ಎಂದು ಹೇಳಿದರು.

ಕೋಲಾರ ಜಿಲ್ಲೆಯಲ್ಲಿ 60 ಸಾವಿರ ವಿಶ್ವಕರ್ಮರಿದ್ದಾರೆ. ಆದರೂ ಅವರನ್ನು ರಾಜಕೀಯವಾಗಿ ಕಡೆಗಣಿಸಲಾಗಿದೆ. ಈ ಸಮುದಾಯದ ಜನರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ಸಮುದಾಯಕ್ಕೆ ಮೀಸಲಾಗಿ ಸೌಲಭ್ಯ ಕಲ್ಪಿಸಬೇಕು ಎಂದರು.

ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ. ಮೋಹನಾಚಾರಿ ಮಾತನಾಡಿ, ವಿಶ್ವಕರ್ಮ ಜಯಂತಿಯಂದು ದೇಶದಾ ದ್ಯಂತ ರಜಾ ಘೋಷಣೆ ಮಾಡಬೇಕು. ದೇಶದಲ್ಲಿ ಚಿನ್ನ, ಬೆಳ್ಳಿ ಕೆಲಸಗಾರರ ಮೇಲೆ ನಡೆಯುತ್ತಿರುವ ಪೊಲೀಸ್‌ ದೌರ್ಜನ್ಯ ತಡೆಯಲು ಕೇಂದ್ರ ಸರ್ಕಾರ ಅಗತ್ಯವಾದ ಕಾನೂನು ಜಾರಿಗೆ ತರ ಬೇಕು. ಸಮುದಾಯಕ್ಕೆ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.

8ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ವತಿಯಿಂದ ಏರ್ಪಡಿಸಲಾಗಿರುವ ರಾಜ್ಯ ಮಟ್ಟದ 9ನೇ ವಿಶ್ವಕರ್ಮ ಜಯಂತ್ಯುತ್ಸವದಲ್ಲಿ ಸಮುದಾಯದ ಜನರು ಭಾಗವಹಿಸಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT