ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ ಗ್ರಾಮೀಣ ವಲಯ ಮೇಲುಗೈ

ಸಿಂದಗಿಯಲ್ಲಿ ಪ್ರಾಥಮಿಕ–ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಥ್ರೋಬಾಲ್ ಕ್ರೀಡಾಕೂಟ
Last Updated 5 ಅಕ್ಟೋಬರ್ 2017, 10:38 IST
ಅಕ್ಷರ ಗಾತ್ರ

ಸಿಂದಗಿ: ಪ್ರಾಥಮಿಕ–ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಥ್ರೋಬಾಲ್ ಕ್ರೀಡಾಕೂಟದಲ್ಲಿ ವಿಜಯಪುರ ಗ್ರಾಮೀಣ ವಲಯದ ಗುಣದಾಳದ ಸರ್ಕಾರಿ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸುವ ಮೂಲಕ ವಿಭಾಗ ಮಟ್ಟಕ್ಕೆ ಆಯ್ಕೆಗೊಂಡಿತು.

ಪಟ್ಟಣದ ಅಂಜುಮನ್ ಪ್ರೌಢಶಾಲೆ ಮೈದಾನದಲ್ಲಿ ಬುಧವಾರ ನಡೆದ ಪಂದ್ಯಾವಳಿಯಲ್ಲಿ ಸಿಂದಗಿಯ ಅಂಜುಮನ್ ಪ್ರೌಢಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆಯಿತು.

ಬಾಲಕಿಯರ ತಂಡದಲ್ಲಿ ವಿಜಯಪುರ ಗ್ರಾಮೀಣ ವಲಯದ ಇಂಡೋ ಜಪಾನ್ ಪ್ರೌಢಶಾಲೆ ಬುರಾಣಪುರ ಪ್ರಥಮ ಸ್ಥಾನ. ದ್ವಿತೀಯ ಸ್ಥಾನವನ್ನು ಸಿಂದಗಿ ಅಂಜುಮನ್ ಪ್ರೌಢಶಾಲೆ ತಂಡ ಪಡೆದುಕೊಂಡವು.

ಪ್ರಾಥಮಿಕ ಹಂತದಲ್ಲಿ ಸಿಂದಗಿ ಶೈಕ್ಷಣಿಕ ವಲಯದ ಕೋರವಾರ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ತನ್ನದಾಗಿಸಿಕೊಂಡಿತು. ಚಡಚಣ ವಲಯದ ರೇವತಗಾಂವ ಹಿರಿಯ ಪ್ರಾಥಮಿಕ ಶಾಲೆಯ ತಂಡ ದ್ವಿತೀಯ ಸ್ಥಾನ ಪಡೆಯಿತು.

ಬಾಲಕಿಯರ ವಿಭಾಗದಲ್ಲಿ ವಿಜಯಪುರ ಗ್ರಾಮೀಣ ವಲಯದ ಸರ್ಕಾರಿ ಪ್ರಾಥಮಿಕ ಶಾಲೆ ಐನಾಪುರ ತಂಡ ಪ್ರಥಮ ಸ್ಥಾನ ಗಳಿಸಿತು. ಇಂಡಿ ವಲಯದ ಆದರ್ಶ ಆಂಗ್ಲ ಮಾಧ್ಯಮ ವಿದ್ಯಾಲಯ ದ್ವಿತೀಯ ಸ್ಥಾನ ತನ್ನದಾಗಿಸಿಕೊಂಡಿತು.

ಉದ್ಘಾಟನೆ:ಜಿಲ್ಲಾ ಮಟ್ಟದ ಪ್ರೌಢ ಮತ್ತು ಪ್ರಾಥಮಿಕ ಹಂತದ ಥ್ರೋಬಾಲ್ ಕ್ರೀಡಾಕೂಟವನ್ನು ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷೆ ಲಲಿತಾ ದೊಡಮನಿ ಸಸಿಗೆ ನೀರುಣಿಸಿ ಉದ್ಘಾಟಿಸಿದರು.

ಅಂಜುಮನ್–ಎ–ಇಸ್ಲಾಂ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಸ್‌.ಎಂ.ಪಾಟೀಲ ಗಣಿಹಾರ, ಕ್ಷೇತ್ರಶಿಕ್ಷಣಾಧಿಕಾರಿ ಆರೀಫ್ ಬಿರಾದಾರ ಮಾತನಾಡಿದರು. ಎಪಿಎಂಸಿ ಅಧ್ಯಕ್ಷ ಕೆಂಚಪ್ಪ ಕತ್ನಳ್ಳಿ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.

ದೈಹಿಕ ಶಿಕ್ಷಣ ಅಧ್ಯಾಪಕ ಪ್ರವೀಣ ಬಿರಾದಾರ ಪ್ರತಿಜ್ಞಾವಿಧಿ ಬೋಧಿಸಿದರು. ಅಧ್ಯಾಪಕ ಪ್ರಭುಲಿಂಗ ಲೋಣಿ ನಿರೂಪಿಸಿದರು. ದೈಹಿಕ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎಸ್.ಮಲ್ಲೇದ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT