ಮಾರುತಿ ಸುಜುಕಿ ಘಟಕ ಪ್ರವೇಶಿಸಿದ ಚಿರತೆ: ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ

ಬುಧವಾರ, ಮೇ 22, 2019
32 °C

ಮಾರುತಿ ಸುಜುಕಿ ಘಟಕ ಪ್ರವೇಶಿಸಿದ ಚಿರತೆ: ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ

Published:
Updated:
ಮಾರುತಿ ಸುಜುಕಿ ಘಟಕ ಪ್ರವೇಶಿಸಿದ ಚಿರತೆ: ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ

ಗುರುಗ್ರಾಮ: ಇಲ್ಲಿನ ಮಾನೇಸರ್‌ನ ಮಾರುತಿ ಸುಜುಕಿ ಘಟಕದಲ್ಲಿ ಗುರುವಾರ ಮುಂಜಾನೆ ಚಿರತೆಯೊಂದು ಪ್ರವೇಶಿಸಿ ಆತಂಕ ಸೃಷ್ಟಿಸಿತ್ತು. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಅವಿತಿದ್ದ ಪ್ರದೇಶವನ್ನು ಸುತ್ತುವರಿದು ಸೆರೆಹಿಡಿಯುವ ಕಾರ್ಯಾಚರಣೆ ಆರಂಭಿಸಿದರು.

‘ಎಂಜಿನ್‌ ವಿಭಾಗ’ ದಲ್ಲಿ ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಚಿರತೆ ಅತ್ತಿಂದಿತ್ತ ಅಲೆದಾಡುತ್ತಿರುವುದನ್ನು ಭದ್ರತಾ ಸಿಬ್ಬಂದಿ ಪತ್ತೆಹಚ್ಚಿದ್ದರು.

ಬೆಳಿಗ್ಗೆ 7 ಗಂಟೆಗೆ ಬೆಳಗ್ಗಿನ ಪಾಳಿ ಕರ್ತವ್ಯಕ್ಕೆ  ಬಂದ ಸಾವಿರಾರು ಕಾರ್ಮಿಕರಿಗೆ ಭದ್ರತಾ ಕಾರಣಗಳಿಂದ ಘಟಕದ ಹೊರಗೆ ಇರುವಂತೆ ತಿಳಿಸಲಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಏಪ್ರಿಲ್‌ನಲ್ಲಿ ಜಿಲ್ಲೆಯ ಸೋಹ್ನಾ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ್ದ ಚಿರತೆ ನಾಲ್ವರಿಗೆ ಗಾಯ ಮಾಡಿತ್ತು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry