ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ಪಿಂಚಣಿ ಯೋಜನೆಗೆ ವಿರೋಧ

Last Updated 5 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಪಿಂಚಣಿ ಯೋಜನೆಯನ್ನು ವಿರೋಧಿಸಿ ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಒಕ್ಕೂಟದ ವತಿಯಿಂದ ಇಲ್ಲಿನ ಜಂತರ್ ಮಂತರ್ ಬಳಿ ಗುರುವಾರ ಶಿಕ್ಷಕರು ಬೃಹತ್‌ ಪ್ರತಿಭಟನೆ ನಡೆಸಿದರು.

ಸರ್ಕಾರ ಜಾರಿಗೆ ತಂದಿರುವ ನೂತನ ಪಿಂಚಣಿ ಯೋಜನೆಯು ಅವೈಜ್ಞಾನಿಕವಾಗಿದ್ದು, ಇದುವರೆಗೆ ಜಾರಿಯಲ್ಲಿದ್ದ ಹಳೆಯ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ದುಡಿಯುವ ವರ್ಗದ ಹಕ್ಕು ಕಿತ್ತುಕೊಳ್ಳುತ್ತಿರುವ ನೂತನ ಯೋಜನೆಯಿಂದಾಗಿ ಶಿಕ್ಷಕರ ಭವಿಷ್ಯ ಅತಂತ್ರವಾಗಿದೆ. ಜೀವನಕ್ಕೆ ಭದ್ರತೆಯೇ ಇಲ್ಲದ ಯೋಜನೆ ಕೈಬಿಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಹಾಗೂ ರಾಷ್ಟಪತಿ ರಾಮನಾಥ ಕೋವಿಂದ್ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ ತಿಳಿಸಿದರು.

7ನೇ ವೇತನ ಆಯೋಗದ ಶಿಫಾರಸುಗಳನ್ನು ಎಲ್ಲ ರಾಜ್ಯ ಸರ್ಕಾರಗಳೂ ಕಡ್ಡಾಯವಾಗಿ ಜಾರಿಗೊಳಿಸಬೇಕು, ರಾಷ್ಟ್ರೀಯ ಶಿಕ್ಷಣ ಮಂಡಳಿ ಸ್ಥಾಪಿಸಬೇಕು ಎಂದು ಕೋರಿ ನಡೆಸಿರುವ ಈ ಪ್ರತಿಭಟನೆಯಲ್ಲಿ ಎಲ್ಲ ರಾಜ್ಯಗಳ ಶಿಕ್ಷಕರು ಹಾಗೂ ರಾಜ್ಯದ 3000ಕ್ಕೂ ಅಧಿಕ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಎಂದು ಅವರು ವಿವರಿಸಿದರು.

ಒಕ್ಕೂಟದ ರಾಷ್ಟ್ರೀಯ ಘಟಕದ ಅಧ್ಯಕ್ಷ ರಾಮಪಾಲ್‌ ಸಿಂಗ್‌, ಮಹಾ ಪ್ರಧಾನ ಕಾರ್ಯದರ್ಶಿ ಕಮಲಕಾಂತ ತ್ರಿಪಾಠಿ, ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವಿ.ಎಂ. ನಾರಾಯಣಸ್ವಾಮಿ, ಮುಖಂಡರಾದ ಎಸ್‌.ಡಿ. ಗಂಗಣ್ಣವರ, ರಮಾದೇವಿ, ಚಂದ್ರಶೇಖರ ನುಗ್ಗಿ, ಭಾರತಿ, ಪದ್ಮಲತಾ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT