ಸಿದ್ದರಾಮಯ್ಯ ಭಾವಚಿತ್ರಕ್ಕೆ ನಾಗಾ ಸಾಧುಗಳ ಪೂಜೆ

ಬುಧವಾರ, ಜೂನ್ 19, 2019
24 °C

ಸಿದ್ದರಾಮಯ್ಯ ಭಾವಚಿತ್ರಕ್ಕೆ ನಾಗಾ ಸಾಧುಗಳ ಪೂಜೆ

Published:
Updated:
ಸಿದ್ದರಾಮಯ್ಯ ಭಾವಚಿತ್ರಕ್ಕೆ ನಾಗಾ ಸಾಧುಗಳ ಪೂಜೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಳಿತಿಗಾಗಿ ಕಾಂಗ್ರೆಸ್‌ ಪಕ್ಷದ ಮುಖಂಡರೊಬ್ಬರು ಉತ್ತರ ಭಾರತದ ನಾಗಾ ಸಾಧುಗಳನ್ನು ಮನೆಗೆ ಆಹ್ವಾನಿಸಿ ಪೂಜೆ ಮಾಡಿಸಿದ್ದಾರೆ.

ಕನಕಗಿರಿಯಲ್ಲಿರುವ ಕಂಸಾಳೆ ರವಿ ಎಂಬುವರ ನಿವಾಸಕ್ಕೆ ಗುರುವಾರ ಬೆಳಿಗ್ಗೆ ಭೇಟಿ ನೀಡಿದ ನಾಲ್ವರು ನಾಗಾ ಸಾಧುಗಳು ಸಿದ್ದರಾಮಯ್ಯ ಹಾಗೂ ಶಾಸಕ ವರ್ತೂರು ಪ್ರಕಾಶ್‌ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿದರು.

‘ಕೆಲ ದಿನಗಳ‌‌ ಹಿಂದೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದ ನಾಗಾ ಸಾಧುಗಳೇ ಬುಧವಾರ ರಾತ್ರಿ ಇಲ್ಲಿಗೆ ಬಂದಿದ್ದರು. ಹೀಗಾಗಿ, ಅವರನ್ನು ಗುರುವಾರ ಮನೆಗೆ ಆಹ್ವಾನಿಸಿ ಪೂಜಾ ಕಾರ್ಯಕ್ರಮ ಇಟ್ಟುಕೊಂಡೆ. ಮುಖಂಡರ ಭಾವಚಿತ್ರಗಳಿಗೆ ಅವರು ಆಶೀರ್ವದಿಸಿದರು’ ಎಂದು ಕಂಸಾಳೆ ರವಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಬಳಿಕ ನಾಗಾ ಸಾಧುಗಳು ಚಾಮುಂಡಿಬೆಟ್ಟಕ್ಕೆ ತೆರಳಿದರು. ಅಲ್ಲಿಂದ ಧರ್ಮಸ್ಥಳಕ್ಕೆ ಪ್ರಯಾಣ ಬೆಳೆಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry