ಐ.ಟಿ ವಿಚಾರಣೆಗೆ ಸಚಿವ ಡಿ.ಕೆ.ಶಿವಕುಮಾರ್‌ ಹಾಜರು

ಶನಿವಾರ, ಮೇ 25, 2019
27 °C

ಐ.ಟಿ ವಿಚಾರಣೆಗೆ ಸಚಿವ ಡಿ.ಕೆ.ಶಿವಕುಮಾರ್‌ ಹಾಜರು

Published:
Updated:

ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಆದಾಯ ತೆರಿಗೆ (ಐ.ಟಿ) ಅಧಿಕಾರಿಗಳ ಎದುರು ಗುರುವಾರ ವಿಚಾರಣೆಗೆ ಹಾಜರಾದರು.

ಶಿವಕುಮಾರ್‌ ಮತ್ತು ಅವರ ಆಪ್ತರ ಮನೆ, ಕಚೇರಿ ಸೇರಿ 60 ಕಡೆ ದಾಳಿ ಐ.ಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಅಘೋಷಿತ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು.

ವಿಚಾರಣೆ ಬಳಿಕ ಮಾಧ್ಯಮ ಪ್ರತಿ ನಿಧಿಗಳ ಜತೆ ಮಾತನಾಡಿದ ಶಿವಕುಮಾರ್, ‘ಐ.ಟಿ ಅಧಿಕಾರಿಗಳು ಕೆಲವು ದಾಖಲೆ ಪತ್ರಗಳನ್ನು ನೀಡುವಂತೆ ತಿಳಿಸಿದ್ದರು. ಅವರು ಕೇಳಿದ ಎಲ್ಲ ದಾಖಲೆಗಳನ್ನು ಒದಗಿಸಿದ್ದೇನೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry