ಆನೇಕಲ್ ಸುತ್ತಮುತ್ತ ಉತ್ತಮ ಮಳೆ ‌

ಗುರುವಾರ , ಜೂನ್ 20, 2019
28 °C

ಆನೇಕಲ್ ಸುತ್ತಮುತ್ತ ಉತ್ತಮ ಮಳೆ ‌

Published:
Updated:

ಆನೇಕಲ್‌: ತಾಲ್ಲೂಕಿನಾದ್ಯಂತ ಭಾರಿ ಮಳೆಯಾಗಿದ್ದು ರಾಷ್ಟ್ರೀಯ ಹೆದ್ದಾರಿ 7ರ ವೀರಸಂದ್ರದ ಬಳಿ ಮಳೆಯ ನೀರು ರಸ್ತೆಯಲ್ಲಿ ತುಂಬಿ ಹರಿದಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಎರಡು ತಾಸಿಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತ್ತು.

ಜನರು ಮುಂದೆ ಸಾಗಲು ಸಾಧ್ಯವಾಗದೇ ಪರದಾಡಿದರು. ಸದಾ ಗಿಜಿಗುಡುವ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದರಿಂದ ಕಿ.ಮೀಗಟ್ಟಲೇ ವಾಹನಗಳು ನಿಂತಿದ್ದವು.

ಇತ್ತೀಚಿಗೆ ಮಳೆ ಬಂದರೆ ಸಾಕು ವೀರಸಂದ್ರ ಜಂಕ್ಷನ್‌ನಲ್ಲಿ ನೀರು ತುಂಬಿಕೊಳ್ಳುತ್ತದೆ. ಇದರಿಂದಾಗಿ ಈ ಭಾಗದಲ್ಲಿ ಸಂಚರಿಸುವ ದ್ವಿಚಕ್ರ ವಾಹನಗಳು, ಕಾರು, ಬಸ್‌ಗಳು ಸದಾ ಸಮಸ್ಯೆಗೆ ಸಿಲುಕಿಕೊಳ್ಳುತ್ತವೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry