ತಾಲ್ಲೂಕು ರಚನೆ: ಶಾಸಕರಿಗೆ ಸಿ.ಎಂ. ಭರವಸೆ

ಮಂಗಳವಾರ, ಜೂನ್ 18, 2019
23 °C

ತಾಲ್ಲೂಕು ರಚನೆ: ಶಾಸಕರಿಗೆ ಸಿ.ಎಂ. ಭರವಸೆ

Published:
Updated:
ತಾಲ್ಲೂಕು ರಚನೆ: ಶಾಸಕರಿಗೆ ಸಿ.ಎಂ. ಭರವಸೆ

ಮೂಡಲಗಿ: ‘ಮುಂದಿನ ಸಚಿವ ಸಂಪುಟದಲ್ಲಿ ಮೂಡಲಗಿ ತಾಲ್ಲೂಕು ರಚನೆಗೆ ಆಡಳಿತಾತ್ಮಕ ಅನುಮೋದನೆ ಯನ್ನು ಖಂಡಿತವಾಗಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದ್ದಾರೆ’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು ಸಹಕಾರ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ತಾವು ಬುಧವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮೂಡಲಗಿ ತಾಲ್ಲೂಕು ರಚನೆಯ ಸಾಧ್ಯತೆಗಳ ಬಗ್ಗೆ ಚರ್ಚಿಸಿದರು.

ಸೆಪ್ಟೆಂಬರ್ 6ರಂದು 49 ಹೊಸ ತಾಲ್ಲೂಕುಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಆದೇಶದಲ್ಲಿ ಮೂಡಲಗಿ ತಾಲ್ಲೂಕುವನ್ನು ಕೈಬಿಟ್ಟಿರುವ ಬಗ್ಗೆ ಜನರಲ್ಲಿ ಉಂಟಾದ ಆಕ್ರೋಶದ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು ಮನವಿಗೆ ಸ್ಪಂದಿಸಿದ್ದು, ಮುಂಬರುವ ಸಂಪುಟ ಸಭೆಯಲ್ಲಿ ಮೂಡಲಗಿ ತಾಲ್ಲೂಕು ಪ್ರಸ್ತಾವ ವಿಷಯವನ್ನು ಸಂಪುಟಕ್ಕೆ ತರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಆದೇಶ ನೀಡಿದ್ದಾರೆ ಎಂದು ಜಾರಕಿಹೊಳಿ ಅವರು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry