ಅನ್ಯ ಜಾತಿಗಳ ವಿಲೀನಕ್ಕೆ ಆಕ್ಷೇಪವಿಲ್ಲ

ಬುಧವಾರ, ಜೂನ್ 26, 2019
25 °C

ಅನ್ಯ ಜಾತಿಗಳ ವಿಲೀನಕ್ಕೆ ಆಕ್ಷೇಪವಿಲ್ಲ

Published:
Updated:

ಹರಪನಹಳ್ಳಿ: ಪರಿಶಿಷ್ಟ ಪಂಗಡಕ್ಕೆ ಅನ್ಯ ಜ್ಯಾತಿಗಳನ್ನು ವಿಲೀನಗೊಳಿಸಲು ಆಕ್ಷೇಪವಿಲ್ಲ. ಆದರೆ, ಸರ್ಕಾರ ಮೀಸಲಾತಿಯನ್ನು ಶೇ 7.5ಕ್ಕೆ ಹೆಚ್ಚಿಸಬೇಕು ಎಂದು ನಿವೃತ್ತ ಪ್ರಾಂಶುಪಾಲ ಟಿ.ಪರಮೇಶ್ವರಪ್ಪ ಆಗ್ರಹಿಸಿದರು. ತಾಲ್ಲೂಕು ಆಡಳಿತ ಸಾಮರ್ಥ್ಯಸೌಧ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.

ಮೀಸಲಾತಿಯನ್ನು ಹೆಚ್ಚಿಸದಿದ್ದರೆ ಸಮುದಾಯದ ಅಭಿವೃದ್ಧಿಗೆ ಹಿನ್ನಡೆಯಾಗಲಿದೆ. ಸರ್ಕಾರ ಗಮನಹರಿಸಬೇಕು. ನಾಯಕ ಜನಾಂಗ ತ್ಯಾಗ, ಬಲಿದಾನ, ವಿಶ್ವಾಸವನ್ನು ಆದರ್ಶ ಎಂದು ಭಾವಿಸಿ ಜೀವನದಲ್ಲಿ ಅಳವಡಿಸಿಕೊಂಡು ಬಂದಿದ್ದಾರೆ. ವಿಜಯನಗರ ಸಾಮ್ರಾಜ್ಯ ಪತನದ ನಂತರ ನಾಯಕ ಜನಾಂಗದ ಪಾಳೇಗಾರರು ಅನೇಕ ಕೆರೆ, ದೇವಸ್ಥಾನಗಳನ್ನು ನಿರ್ಮಿಸಿ ಜನಮನ್ನಣೆ ಗಳಿಸಿದ್ದರು. ಸರ್ಕಾರ ಅವುಗಳನ್ನು ಉಳಿಸಬೇಕು ಎಂದು ಒತ್ತಾಯಿಸಿದರು.

ವಾಲ್ಮೀಕಿ ರಚಿಸಿದ ರಾಮಾಯಣ ಗ್ರಂಥ ವಿಶ್ವಕ್ಕೆ ಮಾದರಿಯಾಗಿದೆ. ರಾಮಾಯಣ ಗ್ರಂಥದಲ್ಲಿ ಮಹಿಳೆಯರಿಗೆ ಸ್ಥಾನಮಾನ ಸಹೋದರತೆ, ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯಲಾಗಿದೆ ಎಂದರು.

ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್‌ ಸಮಾರಂಭ ಉದ್ಘಾಟಿಸಿ ಮಾತನಾಡಿ, ‘ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಕೊಟ್ಯಂತರ ರೂಪಾಯಿ ಅನುದಾನ ಬರುತ್ತಿದೆ. ಅದನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ ಪಡೆಯಬೇಕು. ಸಮಾಜ ಮುನ್ನಲೆಗೆ ಬರಬೇಕು ಎಂದು ಕರೆ ನೀಡಿದರು.

ನಾಯಕ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯ್ತಿ ಸದಸ್ಯರಾದ ಪರಶುರಾಮಪ್ಪ, ಸುವರ್ಣ ಆರುಂಡಿ, ಡಿ.ಸಿದ್ದಪ್ಪ, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ಮಂಜ್ಯಾನಾಯ್ಕ, ಸಮಾಜದ ಮುಖಂಡರಾದ ನಿಚ್ಚವ್ವನಹಳ್ಳಿ ಭೀಮಪ್ಪ, ಪರಶುರಾಮಪ್ಪ ಮಾತನಾಡಿದರು.

ಅನ್ನಪೂರ್ಣಮ್ಮ ಅಧ್ಯಕ್ಷತೆ ವಹಿಸಿದ್ದರು. ಅಧಿಕಾರಿಗಳಾದ ಕೆ.ಗುರುಬಸವರಾಜ್‌, ಐ.ಬಸವರಾಜ್‌, ಎಸ್‌.ಬಸವರಾಜ್‌, ಅಂಜನೇಯ, ಬಸಪ್ಪ, ಶಿರಹಟ್ಟಿ ದಂಡ್ಯೆಪ್ಪ, ಒ.ರಾಮಪ್ಪ, ತಾಲ್ಲೂಕು ಪಂಚಾಯ್ತಿ ಸದಸ್ಯರು ಉಪಸ್ಥಿತರಿದ್ದರು. ಆನಂದ ಡೊಳ್ಳಿನ ಸ್ವಾಗತಿಸಿದರು. ಬಸವರಾಜ್‌ ನಿರೂಪಿಸಿದರು. ಪೂಜಾರ್ ಮಂಜುನಾಥ್‌ ವಂದಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry