ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಗಲ್: ಹಿರೇಕೆರೆಗೆ ಬಾಗಿನ ಅರ್ಪಣೆ

Last Updated 6 ಅಕ್ಟೋಬರ್ 2017, 6:27 IST
ಅಕ್ಷರ ಗಾತ್ರ

ನರೇಗಲ್: ಕೆರೆಗಳಲ್ಲಿ ನೀರು ಭರ್ತಿಯಾಗುವುದರಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಿ ರೈತರ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಅನುಕೂಲವಾಗುತ್ತದೆ. ಇದು ರೈತರಿಗೆ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಶಾಸಕ ಜಿ.ಎಸ್.ಪಾಟೀಲ ಹೇಳಿದರು.

ವಾರದಿಂದ ಸುರಿಯುತ್ತಿರುವ ಮಳೆಗೆ ಭರ್ತಿಯಾಗಿರುವ ಸ್ಥಳೀಯ ಹಿರೇಕೆರೆಗೆ ಬುಧವಾರ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ಗ್ರಾಮಸ್ಥರು ಕೆರೆ ನೀರನ್ನು ಮಿತವಾಗಿ ಬಳಸಬೇಕು. ಕೆರೆ ಹಾಗೂ ಕೆರೆಯ ಪರಿಸರವನ್ನು ಸಂರಕ್ಷಿಸಬೇಕು. ಮುಂದಿನ ದಿನಗಳಲ್ಲಿ ಕೆರೆಯನ್ನು ಇನ್ನಷ್ಟು ಅಭಿವೃದ್ಧಿಗೊಳಿಸಲಾಗುವುದು ಎಂದರು.

ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯರು ಮಾತನಾಡಿ, ಕೆರೆಗಳು ಗ್ರಾಮೀಣ ಭಾಗದ ಜನರ ಜೀವನಾಡಿ. ಅವು ತುಂಬಿದರೆ ರೈತರ ಬದುಕು ಉಜ್ವಲವಾಗಲಿದೆ ಎಂದು ಹೇಳಿದರು.

ಮಹಿಳೆಯರು ಕೆರೆಯ ನೀರು ತುಂಬಿದ ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡರು. ನಂತರ ಗಂಗಾಮಾತೆಗೆ ಪೂಜೆ ಸಲ್ಲಿಸಿ ಕೆರೆಗೆ ಬಾಗಿನ ಅರ್ಪಿಸಲಾಯಿತು. ಸ್ಥಳೀಯ ದರ್ಗಾದ ಮಂಜೂರ್ ಹುಸೇನ್ ಶ್ಯಾವಲಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಕಲ್ಮೇಶ ತೊಂಡಿಹಾಳ, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ರೂಪಾ ಅಂಗಡಿ, ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷೆ ಶಿವಮ್ಮ ಬಾದನಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT