‘ನರೇಂದ್ರ ಮೋದಿ ಪಲಾಯನವಾದಿ’

ಗುರುವಾರ , ಜೂನ್ 20, 2019
31 °C

‘ನರೇಂದ್ರ ಮೋದಿ ಪಲಾಯನವಾದಿ’

Published:
Updated:

ಕಲಬುರ್ಗಿ: ‘ದೇಶದ ಜನರಿಗೆ ಕನಸು ತೋರಿಸಿದ್ದೇ ಮೋದಿ ಸರ್ಕಾರದ ದೊಡ್ಡ ಸಾಧನೆಯಾಗಿದೆ. ಜನಧನ ಖಾತೆಗೆ ಹಣ ಮಾಡುವುದಾಗಿ ಸುಳ್ಳು ಆಶ್ವಾಸನೆ ನೀಡಿ ಮೋಸ ಮಾಡಿದ್ದಾರೆ’ ಎಂದು ಜೆಡಿಎಸ್‌ ಯುವ ಮುಖಂಡ ನಾಸಿರ್‌ ಹುಸೇನ್‌ ಹೇಳಿದರು. ಇಲ್ಲಿನ ಮುಸ್ಲಿಂ ಚೌಕ್‌ನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿದೇಶದಲ್ಲಿರುವ ಕಪ್ಪುಹಣ ಮರಳಿ ತರುವುದಾಗಿ ಚುನಾವಣೆಗೂ ಮೊದಲು ಭರವಸೆ ನೀಡಿ, ಈಗ ಪಲಾಯನವಾದಿಯಾಗಿದ್ದಾರೆ. ನೋಟು ರದ್ದತಿ ಮೂಲಕ ಬಡಜನರಿಗೆ ಕಷ್ಟಕೊಟ್ಟಿದ್ದೇ ಕೇಂದ್ರ ಸರ್ಕಾರದ ದೊಡ್ಡ ಸಾಧನೆ’ ಎಂದು ಟೀಕಿಸಿದರು.

‘ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಜೆಡಿಎಸ್‌ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದು, ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ತಡಕಲ್‌, ಮುಖಂಡರಾದ ಜಾವೀದ್‌, ಹಬೀದ್‌ ಸಮಸ್ತ, ಪೈಸಲ್‌, ರಹೀಂ ಸೇಠ್‌, ಓಯಜ್‌ ಸಾಹೇಬ್‌, ಅದನ್ ಖಾನ್‌, ಗಜಾನಂದ ದೇಶಪಾಂಡೆ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry