ಶಶಿಕಲಾ ನಟರಾಜನ್‌ಗೆ 5 ದಿನ ಪೆರೋಲ್‌

ಬುಧವಾರ, ಜೂನ್ 26, 2019
25 °C
ಚೆನ್ನೈಗೆ ತೆರಳಲಿರುವ ಶಶಿಕಲಾ

ಶಶಿಕಲಾ ನಟರಾಜನ್‌ಗೆ 5 ದಿನ ಪೆರೋಲ್‌

Published:
Updated:
ಶಶಿಕಲಾ ನಟರಾಜನ್‌ಗೆ 5 ದಿನ ಪೆರೋಲ್‌

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ಪಕ್ಷದ ಮುಖ್ಯಸ್ಥೆ ವಿ. ಕೆ. ಶಶಿಕಲಾ ನಟರಾಜನ್ ಅವರಿಗೆ ಐದು ದಿನಗಳ ಪೆರೋಲ್ ರಜೆ ನೀಡಲಾಗಿದೆ ಎಂದು ಕಾರಾಗೃಹ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ವಿ.ಕೆ.ಶಶಿಕಲಾ ಅವರ ಪತಿ ನಟರಾಜನ್‌ ಅನಾರೋಗ್ಯ ಪೀಡಿತರಾಗಿದ್ದು ಅವರನ್ನು ನೋಡಲು ಶಶಿಕಲಾಗೆ ಪೆರೋಲ್ ನೀಡಲಾಗಿದೆ. ತಮಿಳುನಾಡು ಸರ್ಕಾರದ ಶಿಪಾರಸ್ಸಿನ ಮೇರೆಗೆ ಪೆರೋಲ್‌ ನೀಡಲಾಗಿದೆ.

ಶುಕ್ರವಾರ ಚೆನ್ನೈಗೆ ತೆರಳಿ ಶಶಿಕಲಾ ಪತಿಯನ್ನು ಭೇಟಿ ಮಾಡಲಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟರಾಜನ್‌ ಕಿಡ್ನಿ ಹಾಗೂ ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಪತಿಯ ಭೇಟಿಯನ್ನು ಹೊರತುಪಡಿಸಿ ಬೇರೆ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಿರುವಂತೆ ನ್ಯಾಯಾಲಯ ಸೂಚಿಸಿದೆ. ಚೆನ್ನೈ ಪೊಲೀಸರು ಶಶಿಕಲಾ ಅವರ ಮೇಲೆ ನಿಗಾವಹಿಸಲಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry