ಅಡೆನ್ ಕೊಲ್ಲಿಯಲ್ಲಿ ಕಡಲ್ಗಳ್ಳರ ದಾಳಿ

ಗುರುವಾರ , ಜೂನ್ 20, 2019
31 °C

ಅಡೆನ್ ಕೊಲ್ಲಿಯಲ್ಲಿ ಕಡಲ್ಗಳ್ಳರ ದಾಳಿ

Published:
Updated:
ಅಡೆನ್ ಕೊಲ್ಲಿಯಲ್ಲಿ ಕಡಲ್ಗಳ್ಳರ ದಾಳಿ

ನವದೆಹಲಿ: ಅಡೆನ್‌ ಕೊಲ್ಲಿಯಲ್ಲಿ ಭಾರತೀಯ ನೌಕಾಪಡೆ ಹಾಗೂ ಕಡಲ್ಗಳ್ಳರ ನಡುವೆ ದಾಳಿ–ಪ್ರತಿ ದಾಳಿ ನಡೆದಿದೆ.

ಶುಕ್ರವಾರ ಮಧ್ಯಾಹ್ನ ನಡೆದ ಈ ದಾಳಿಯಲ್ಲಿ ಕನಿಷ್ಠ 12 ಮಂದಿ ಕಡಲ್ಗಳ್ಳರು ಭಾಗಿಯಾಗಿದ್ದರು ಎಂದು ಶಂಕಿಸಲಾಗಿದೆ.

ಕಡಲ್ಗಳ್ಳರ ದಾಳಿಯನ್ನು ನೌಕಾಪಡೆ ತಡೆದಿದೆ. ಕಡಲ್ಗಳ್ಳರ ವಿರುದ್ಧ ನೌಕಾಪಡೆಯ ವಿಶೇಷ ಪಡೆ ಕಾರ್ಯಾಚರಣೆ ಕೈಗೊಂಡಿದೆ ಎಂದು ಭಾರತಿಯ ನೌಕಾಪಡೆ ತಿಳಿಸಿವೆ.

ಕಡಲ್ಗಳ್ಳರಿಂದ ಒಂದು ಎಕೆ47, ಒಂದು ಮ್ಯಾಗಜಿನ್‌, 27 ಸುತ್ತು ಗುಂಡುಗಳು, ಹಗ್ಗಗಳು, ಹಗ್ಗದ ಕೊಂಡಿಗಳು, ಇಂಧನ, ಡ್ರಮ್‌ಗಳು ಮತ್ತು ಏಣಿಗಳನ್ನು ವಶಕ್ಕೆ ಪಡೆಯಲಾಗಿದೆ. 26 ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ನೌಕಾಪಡೆ ಹೇಳಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry