‘ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ತೆಗೆಯಲಿ’

ಮಂಗಳವಾರ, ಜೂನ್ 18, 2019
26 °C

‘ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ತೆಗೆಯಲಿ’

Published:
Updated:
‘ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ತೆಗೆಯಲಿ’

ಬೆಂಗಳೂರು: ‘ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಮೊದಲು ತೆಗೆಯಲಿ. ಕೇರಳಕ್ಕೆ ಬಂದು ನೊಣ ತೆಗೆಯುವ ಉಸಾಬರಿ ಅವರಿಗ್ಯಾಕೆ?’ ಎಂದು ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಬಿ. ಕೆ. ಹರಿಪ್ರಸಾದ್ ಖಾರವಾಗಿ ಪ್ರಶ್ನಿಸಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಯೋಗಿ ಆದಿತ್ಯನಾಥ್ ತಮ್ಮ ರಾಜ್ಯದ ಸಮಸ್ಯೆಗಳನ್ನು ಮೊದಲು ಬಗೆಹರಿಸಲಿ. ಗೋರಖಪುರದಲ್ಲಿ ನಡೆದ ಮುಗ್ಧ ಮಕ್ಕಳ ಸಾವಿನ ಬಗ್ಗೆ ತಲೆಕೆಡಿಸಿಕೊಳ್ಳಲು ಅವರಿಗೆ ಪುರುಸೋತ್ತಿಲ್ಲ’ ಎಂದು ಟೀಕಿಸಿದರು.

‘ಅಮಿತ್ ಷಾ ಗುಜರಾತ್‌ ಎನ್‌ಕೌಂಟರ್ ಸ್ಪೆಷಲಿಸ್ಟ್ ಎಂದೇ ಹೆಸರು ಪಡ್ಕೊಂಡವರು. ಷಾ ಅವರನ್ನು ಸುಪ್ರೀಂ ಕೋರ್ಟ್ ಗುಜರಾತಿನಿಂದ ಎರಡು ವರ್ಷ ಗಡಿಪಾರು ಮಾಡಿತ್ತು’ ಎಂದೂ ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry