ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ತಿಂಗಳ ಗರಿಷ್ಠ ಮಟ್ಟಕ್ಕೆ ಷೇರುಪೇಟೆ ವಹಿವಾಟು ಏರಿಕೆ

Last Updated 6 ಅಕ್ಟೋಬರ್ 2017, 20:29 IST
ಅಕ್ಷರ ಗಾತ್ರ

ಮುಂಬೈ : ದೇಶದ ಷೇರುಪೇಟೆಗಳಲ್ಲಿ ಶುಕ್ರವಾರ ಉತ್ತಮ ವಹಿವಾಟು ನಡೆಯಿತು. ಇದರಿಂದ ಮೂರು ವಾರಗಳ ವಹಿವಾಟಿನಲ್ಲಿ ಇದೇ ಮೊದಲ ಬಾರಿಗೆ ಏರುಮುಖವಾಗಿ ವಾರದ ವಹಿವಾಟು ಅಂತ್ಯಕಾಣುವಂತಾಯಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 222 ಅಂಶ ಏರಿಕೆ ಕಂಡು ಎರಡು ವಾರಗಳ ಗರಿಷ್ಠ ಮಟ್ಟವಾದ 31,814 ಅಂಶಗಳಲ್ಲಿ ತಲುಪಿತು. ಸೆಪ್ಟೆಂಬರ್ 22ರ ನಂತರ ವಹಿವಾಟಿನ ಗರಿಷ್ಠ ಮಟ್ಟದ ಅಂತ್ಯ ಇದಾಗಿದೆ. ಅಂದು 31,922 ಅಂಶಗಳಿಗೆ ತಲುಪಿತ್ತು.  ಗುರುವಾರದ ವಹಿವಾಟಿನಲ್ಲಿ 79 ಅಂಶ ಇಳಿಕೆ ಕಂಡಿತ್ತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 91 ಅಂಶ ಹೆಚ್ಚಾಗಿ 9,979 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿತು. ಷೇರುಪೇಟೆಗಳಲ್ಲಿ ದೇಶಿ ಸಾಂಸ್ಥಿಕ ಹೂಡಿಕೆದಾರರೇ ಹೆಚ್ಚಿನ ಹೂಡಿಕೆ ಮಾಡುತ್ತಿದ್ದಾರೆ.

ಗುರುವಾರದ ವಹಿವಾಟಿನಲ್ಲಿ ₹519 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಮಾರಾಟಕ್ಕೆ ಹೆಚ್ಚು ಗಮನ ನೀಡಿದ್ದಾರೆ. ಗುರುವಾರ ₹656 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT