ಐಎಎಫ್‌ ಹೆಲಿಕಾಪ್ಟರ್‌ ಪತನ: ಏಳು ಸಾವು

ಬುಧವಾರ, ಜೂನ್ 26, 2019
22 °C

ಐಎಎಫ್‌ ಹೆಲಿಕಾಪ್ಟರ್‌ ಪತನ: ಏಳು ಸಾವು

Published:
Updated:
ಐಎಎಫ್‌ ಹೆಲಿಕಾಪ್ಟರ್‌ ಪತನ: ಏಳು ಸಾವು

ನವದೆಹಲಿ : ಭಾರತೀಯ ವಾಯುಪಡೆಯ (ಐಎಎಫ್‌) ಎಂಐ– 17ವಿ5 ಹೆಲಿಕಾಪ್ಟರ್‌ ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಗುರುವಾರ ಬೆಳಿಗ್ಗೆ 6 ಗಂಟೆಗೆ ಪತನಗೊಂಡಿದ್ದು, ಏಳು ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ.‌

‘ಈ ಅವಘಡದ ಕಾರಣ ಪತ್ತೆ ಹಚ್ಚಲು ತನಿಖೆಗೆ ಆದೇಶಿಸಲಾಗಿದೆ’ ಎಂದು ಹಿರಿಯ ಐಎಎಫ್‌ ಅಧಿಕಾರಿ ತಿಳಿಸಿದ್ದಾರೆ. ಐವರು ಸಿಬ್ಬಂದಿ ಮೃತಪಟ್ಟು ಒಬ್ಬರು ಗಂಭೀರವಾಗಿ ಗಾಯಗೊಂಡಿರುವುದಾಗಿ ಆರಂಭದಲ್ಲಿ ಅಧಿಕಾರಿಗಳು ತಿಳಿಸಿದ್ದರು. ರಷ್ಯಾ ನಿರ್ಮಿತ ಈ ಹೆಲಿಕಾಪ್ಟರ್‌, ಕಣಿವೆ ಪ್ರದೇಶದಲ್ಲಿರುವ ಸೇನಾ ಠಾಣೆಗೆ ಅಗತ್ಯ ಸಾಮಗ್ರಿಗಳನ್ನು ಕೊಂಡೊಯ್ಯುತ್ತಿತ್ತು. ವಾಯುಪಡೆ ದಿನಾಚರಣೆಗೆ ಎರಡೇ ದಿನ ಬಾಕಿ ಇರುವಾಗ, ಚೀನಾ ಗಡಿಗೆ ಹೊಂದಿಕೊಂಡ ಪ್ರದೇಶದಲ್ಲಿ ದುರಂತ ಸಂಭವಿಸಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry