ಹಿಂಗಾರು ಮಳೆಯಿಂದ ಉತ್ತಮ ರಾಗಿ

ಮಂಗಳವಾರ, ಜೂನ್ 25, 2019
25 °C

ಹಿಂಗಾರು ಮಳೆಯಿಂದ ಉತ್ತಮ ರಾಗಿ

Published:
Updated:
ಹಿಂಗಾರು ಮಳೆಯಿಂದ ಉತ್ತಮ ರಾಗಿ

ಶ್ರವಣಬೆಳಗೊಳ : ಹೋಬಳಿಯಾದ್ಯಂತ ಉತ್ತಮ ಹಿಂಗಾರು ಮಳೆಯಾಗುತ್ತಿದ್ದು, ಕ್ಷೇತ್ರ ಮಟ್ಟದಲ್ಲಿ ಎಲ್ಲಾ ಬೆಳೆಗಳು ಉತ್ತಮವಾಗಿದೆ ಎಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಸಿ. ದೊರೆಸ್ವಾಮಿ ತಿಳಿಸಿದ್ದಾರೆ.

ಈವರೆಗೂ 3,700 ಹೆಕ್ಟೇರ್‌ನಲ್ಲಿ ರಾಗಿ ಬಿತ್ತನೆ, 10 ಹೆಕ್ಟೇರ್‌ನಲ್ಲಿ ತೊಗರಿ, 170 ಹೆಕ್ಟೇರ್‌ನಲ್ಲಿ ಹುರುಳಿ, 150 ಹೆಕ್ಟೇರ್‌ನಲ್ಲಿ ಅವರೆ, 10 ಹೆಕ್ಟೇರ್‌ನಲ್ಲಿ ಕಬ್ಬು ಬಿತ್ತನೆಯಾಗಿದೆ. ರೈತ ಸಂಪರ್ಕ ಕೇಂದ್ರದಿಂದ 13,115 ಕೆ.ಜಿ. ರಾಗಿ, 9,545 ಕೆ.ಜಿ. ಮೆಕ್ಕೆಜೋಳ, 5,050 ಕೆ.ಜಿ. ಹಸಿರೆಲೆ ಗೊಬ್ಬರ (ಸನ್‌ ಹೆಂಪು) ವಿತರಣೆಯಾಗಿದೆ.

‘ಈ ಬಾರಿ ಹದ ಮಳೆಯಾಗಿದ್ದು, ಸಮಯಕ್ಕೆ ಸರಿಯಾಗಿ ರೈತರು ಬೇಸಾಯ ಕ್ರಮಗಳನ್ನು ಕೈಗೊಂಡು ಕಳೆ ತೆಗೆಸಬೇಕು. ಹೆಚ್ಚಿನ ಇಳುವರಿಯ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ’ ಎಂದು ಕೃಷಿ ಅಧಿಕಾರಿ ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry