ಪಾಲಿಕೆ ಆವರಣದಲ್ಲಿ ಭಜನೆ ಮಾಡಿದ ಬಿಜೆಪಿ ಸದಸ್ಯರು

ಗುರುವಾರ , ಜೂನ್ 20, 2019
24 °C

ಪಾಲಿಕೆ ಆವರಣದಲ್ಲಿ ಭಜನೆ ಮಾಡಿದ ಬಿಜೆಪಿ ಸದಸ್ಯರು

Published:
Updated:
ಪಾಲಿಕೆ ಆವರಣದಲ್ಲಿ ಭಜನೆ ಮಾಡಿದ ಬಿಜೆಪಿ ಸದಸ್ಯರು

ಹುಬ್ಬಳ್ಳಿ: ಪಾಲಿಕೆಯ ನಿವೃತ್ತ ನೌಕರರಿಗೆ ಬರಬೇಕಿರುವ ಪಿಂಚಣಿ ಮೊತ್ತವನ್ನು ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿದ್ದ ಸಚಿವ ವಿನಯ ಕುಲಕರ್ಣಿ ಮಾತು ತಪ್ಪಿದ್ದಾರೆ ಎಂದು ಆರೋಪಿಸಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಭಜನೆ ನಡೆಸಿ ಪ್ರತಿಭಟನೆ ನಡೆಸಿದರು.

ಪಾಲಿಕೆ ಆವರಣದಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆದ ಭಜನೆಯಲ್ಲಿ ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ ಕಲಬುರ್ಗಿ, ಪಾಲಿಕೆ ಸದಸ್ಯರಾದ ವೀರಣ್ಣ ಸವಡಿ, ಸ್ಮಿತಾ ಜಾಧವ, ಮಹೇಶ ಬುರ್ಲಿ, ಶಿವಾನಂದ ಮುತ್ತಣ್ಣವರ, ಮೇನಕಾ ಹುರಳಿ, ಶಿವು ಮೆಣಸಿನಕಾಯಿ ಸೇರಿದಂತೆ ಹಲವು ಸದಸ್ಯರು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.

ಹಣ ಬಿಡುಗಡೆಯಾಗುವವರೆಗೂ ಧರಣಿ ಮುಂದುವರಿಯಲಿದೆ. ಶನಿವಾರ ಪಾಲಿಕೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಇರುವುದರಿಂದ ಧರಣಿ ಇರುವುದಿಲ್ಲ ಎಂದು ಮುತ್ತಣ್ಣವರ ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry