ಅಕ್ರಮ ಚಟುವಟಿಕೆಗಳ ತಾಣವಾಗಿರುವ ಭವನ

ಸೋಮವಾರ, ಜೂನ್ 24, 2019
29 °C

ಅಕ್ರಮ ಚಟುವಟಿಕೆಗಳ ತಾಣವಾಗಿರುವ ಭವನ

Published:
Updated:
ಅಕ್ರಮ ಚಟುವಟಿಕೆಗಳ ತಾಣವಾಗಿರುವ ಭವನ

ಮಾಲೂರು: ತಾಲ್ಲೂಕಿನ ಶಿವಾರಪಟ್ಟಣದಲ್ಲಿ ಶಿಲ್ಪಿಗಳ ತರಬೇತಿ ಹಾಗೂ ಶಿಲ್ಪಕಲಾಕೃತಿಗಳ ಪ್ರದರ್ಶನ ಭವನ ನಿರ್ಮಾಣದ ಕಾಮಗಾರಿ ಸ್ಥಗಿತಗೊಂಡಿದ್ದು ಅಕ್ರಮ ಚಟುವಟಿಕೆಗಳ ತಾಣವಾಗಿದೆ.

ದೇಶದಲ್ಲೇ ಶಿಲ್ಪಕಲಾ ಕೃತಿಗೆ ಪ್ರಖ್ಯಾತಿ ಪಡೆದಿರುವ ಶಿವಾರಪಟ್ಟಣ ಗ್ರಾಮದಲ್ಲಿ ಶಿಲ್ಪ ಗ್ರಾಮ ಅಭಿವೃದ್ಧಿ ಯೋಜನೆಯಡಿ ₹ 75 ಲಕ್ಷ ತರಬೇತಿ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಯಿತು. ಆದರೆ ಕಾಮಗಾರಿ ಆರಂಭವಾಗಿ 8 ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ.

ಸುಮಾರು ದಿನಗಳಿಂದ ಕಾಮಗಾರಿ ಸ್ಥಗಿತಗೊಂಡಿರುವುದಿಂದ ಚಾವಣಿಗೆ ಜೋಡಿಸಿರುವ ಹೆಂಚುಗಳು ಬಿದ್ದು ಹೋಗಿವೆ. ಇದಕ್ಕೆ ಅಳವಡಿಸಿರುವ ಪಟ್ಟಿ ಮರಗಳು ಮಳೆಗೆ ನೆನೆದು, ಬಿಸಿಲಿಗೆ ಒಣಗಿ ಹಾಳಾಗಿವೆ. ಮಳೆಯ ನೀರಿಗೆ ಗೋಡೆಗಳು ಸವೆಯುತ್ತಿವೆ. ರಾತ್ರಿ ಹಗಲೆನ್ನದೆ ಮಧ್ಯವ್ಯಸನಿಗಳು ಮದ್ಯಪಾನ ಮಾಡುವ ತಾಣವನ್ನಾಗಿಸಿಕೊಂಡಿದ್ದಾರೆ.

‘ಶಿವಾರಪಟ್ಟಣದ ಗ್ರಾಮದಲ್ಲಿ ವಿಶ್ವಕರ್ಮರು ಸೇರಿದಂತೆ ಇತರೆ ಸಮುದಾಯದವರು ಶಿಲ್ಪಿಗಳಾಗಿ ಕಾಯಕ ನಿರ್ವಹಿಸುತ್ತಿದ್ದಾರೆ. ಸರ್ಕಾರ ಅವರ ಅಭಿವೃದ್ಧಿಗೆ ಹಲವು ಯೋಜನೆ ರೂಪಿಸಿದ್ದು, ಕಾರ್ಯಗತಗೊಳಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ’ ಎಂದು ಶಿಲ್ಪಿ ಚಂದ್ರಶೇಖರ್ ಆರೋಪಿಸಿದರು.

2 ವರ್ಷಗಳ ಹಿಂದೆ ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್‌ಚಂದ್ರ ಗ್ರಾಮಕ್ಕೆ ಭೇಟಿ ನೀಡಿ ಸ್ಥಗಿತಗೊಂಡಿರುವ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ಸಂಬಂಧಪಟ್ಟ ಅಧಿಕಾರಿಗಳ ಬಳಿ ಚರ್ಚಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದೆಂದು ಭರವಸೆ ಸಹ ನೀಡಿದ್ದರು. ಆದರೆ ಇಲ್ಲಿಯವರೆಗೂ ಕಾಮಗಾರಿ ಆರಂಭವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಿಲ್ಪಿಗಳು ಕತ್ತನೆ ಮಾಡಿರುವ ಶಿಲ್ಪಗಳನ್ನು ಇಡಲು ಸ್ಥಳವಿಲ್ಲದೆ ಎಲ್ಲಂದರಲ್ಲಿ ಇಡಬೇಕಾದ ಪರಿಸ್ಥಿತಿ ಎದುರಾಗಿದೆ. ಖರೀದಿದಾರರಿಗೆ ಪ್ರದರ್ಶಿಸಲು ಅವಕಾಶವಿಲ್ಲದೆ ಬಹಳ ತೊಂದರೆಯಾಗಿದೆ. ಇನ್ನಾದರೂ ಜಿಲ್ಲಾಡಳಿತ ಶಿಲ್ಪಿಗಳ ಕಷ್ಟಗಳಿಗೆ ಸ್ಪಂದಿಸಿ ನನೆಗುದಿಗೆ ಬಿದ್ದಿರುವ ಶಿಲ್ಪಕಲಾ ತರಬೇತಿ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಲು ಮುಂದಾಗಬೇಕು’ ಎಂದು ಎಸ್.ಎನ್.ಜಗನ್ನಾಥಚಾರಿ ಒತ್ತಾಯಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry