ದುರ್ಗಾದೇವಿ ಮೂರ್ತಿ ಮೆರವಣಿಗೆ

ಮಂಗಳವಾರ, ಜೂನ್ 18, 2019
26 °C

ದುರ್ಗಾದೇವಿ ಮೂರ್ತಿ ಮೆರವಣಿಗೆ

Published:
Updated:
ದುರ್ಗಾದೇವಿ ಮೂರ್ತಿ ಮೆರವಣಿಗೆ

ಯಲಬುರ್ಗಾ: ಸ್ಥಳೀಯ ವಿಜಯ ದುರ್ಗಾದೇವಿ ದೇವಸ್ಥಾನದಲ್ಲಿ ಕಳೆದ ಎರಡು ವಾರಗಳಿಂದ ಹಮ್ಮಿಕೊಂಡಿದ್ದ ದೇವಿ ಪುರಾಣ ಮಹಾಮಂಗಲೋತ್ಸವ ಶುಕ್ರವಾರ ನಡೆಯಿತು. ಪ್ರತಿದಿನ ರಾತ್ರಿ ಪುರಾಣ ಪಠಣ, ಪ್ರವಚನ ಹಾಗೂ ಸಂಗೀತ ಕಾರ್ಯಕ್ರಮಗಳು ಜರುಗಿದವು, ವಿವಿಧ ಹೂಗಳಿಂದ ಅಲಂಕರಿಸಿದ್ದ ದೇವಸ್ಥಾನದ ಆವರಣದಿಂದ ಬೆಳಿಗ್ಗೆ ಆರಂಭವಾದ ದೇವಿ ಮೂರ್ತಿಯುಳ್ಳ ಅಂಬಾರಿ ಮೆರವಣಿಗೆ ಎಲ್ಲರನ್ನು ಆಕರ್ಷಿಸಿತು.

ವಿವಿಧ ವಾದ್ಯಮೇಳದೊಂದಿಗೆ ಪಟ್ಟಣದ ವಿವಿಧ ಬೀದಿಗಳಲ್ಲಿ ನಡೆದ ಈ ಮೆರವಣಿಗೆಯಲ್ಲಿ ಸಾಕಷ್ಟು ಸಂಖ್ಯೆಯ ಭಕ್ತರು, ಮಹಿಳೆಯರು ಕುಂಭ ಹಾಗೂ ಆರತಿ ತಟ್ಟೆಗಳೊಂದಿಗೆ ಪಾಲ್ಗೊಂಡಿದ್ದರು. ಸುತ್ತಮುತ್ತಲಿನ ವಿವಿಧ ಗ್ರಾಮದ ಜನರು ಪಾಲ್ಗೊಂಡಿದ್ದರಿಂದ ಕಳೆದ ವರ್ಷಕ್ಕಿಂತಲೂ ಜನದಟ್ಟಣೆ ಹೆಚ್ಚಿತ್ತು. ಸುರಿಯುತ್ತಿದ್ದ ತುಂತುರು ಮಳೆಯನ್ನು ಲೆಕ್ಕಿಸದೇ ಮೆರವಣಿಗೆಯಲ್ಲಿ ಭಾಗವಹಿಸಿದರು.

ಸಂಸ್ಥಾನ ಹಿರೇಮಠದ ಪೀಠಾಧಿಕಾರಿ ಸಿದ್ದರಾಮೇಶ್ವರ ಸ್ವಾಮೀಜಿ ಹಾಗೂ ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ಪಟ್ಟಣದಲ್ಲಿ ವೈವಿಧ್ಯಮಯ ರೀತಿಯಲ್ಲಿ ನಡೆಯುವ ಸಾಂಸ್ಕೃತಿಕ ಪರಂಪರೆಯಲ್ಲಿ ವಿಜಯ ದುರ್ಗಾದೇವಿಯ ದೇವಸ್ಥಾನ ಸಮಿತಿಯವರು ಹಮ್ಮಿಕೊಳ್ಳುವ ದಸರಾ ಆಚರಣೆ ಮಾದರಿಯಾಗಿದೆ ಎಂದರು. ಗಣ್ಯರಾದ ಬಸವರಾಜ ಉಳ್ಳಾಗಡ್ಡಿ, ಬಸಪ್ಪ ಕಮ್ಮಾರ, ಸಂಗಪ್ಪ ಕೊಪ್ಪಳ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry