ಗಂಡ, ಮಗನ ಎದುರಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಭಾನುವಾರ, ಜೂನ್ 16, 2019
29 °C

ಗಂಡ, ಮಗನ ಎದುರಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Published:
Updated:
ಗಂಡ, ಮಗನ ಎದುರಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಮುಜಫರ್‌ನಗರ: ಗಂಡ ಮತ್ತು 2 ವರ್ಷದ ಮಗನನ್ನು ಚಾಕುವಿನಿಂದ ಬೆದರಿಸಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಹೀನ ಘಟನೆ ಉತ್ತರ ಪ್ರದೇಶದ ಮುಜಫರ್‌ನಗರದಲ್ಲಿ ನಡೆದಿದೆ.

ಶುಕ್ರವಾರ ಬೆಳಿಗ್ಗೆ ಮಹಿಳೆ ತಮ್ಮ ಪತಿ ಮತ್ತು ಮಗನ ಜತೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಅದೇ ರಸ್ತೆಯಲ್ಲಿ ಕಾರಿನಲ್ಲಿದ್ದ ದುಷ್ಕರ್ಮಿಗಳು ಇವರಿದ್ದ ಬೈಕ್‌ ತಡೆದು, ‘ಮುಂದೆ ಸೇತುವೆ ಕುಸಿದಿದೆ. ಬೇರೆ ರಸ್ತೆಯ ಮೂಲಕ ಹೋಗಿ’ ಎಂದು ಹೇಳಿದ್ದಾರೆ.

ಬೈಕ್‌ ಬೇರೆ ರಸ್ತೆಗೆ ಹೊರಳುತ್ತಿದ್ದಂತೆ ಅವರನ್ನು ಕಾರಿನಲ್ಲಿ ಹಿಂಬಾಲಿಸಿರುವ 4 ಮಂದಿ ದುಷ್ಕರ್ಮಿಗಳು ಬೈಕ್‌ ತಡೆದು ಮಹಿಳೆಯ ಪತಿಯನ್ನು ಥಳಿಸಿದ್ದಾರೆ. ಬಳಿಕ ಮಗನ ಕುತ್ತಿಗೆಗೆ ಚಾಕುನಿಂದ ಹಿಡಿದುಕೊಂಡು, ಮಗನನ್ನು ಕೊಲೆ ಮಾಡುವುದಾಗಿ ಬೆದರಿಸಿ ಕಬ್ಬಿನ ಗದ್ದೆಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ’ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry