ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗ್ಯ ಸ್ಥಳದಲ್ಲಿ ಮಾತ್ರವೇ ಪಟಾಕಿ ಮಾರಾಟಕ್ಕೆ ಅವಕಾಶ

Last Updated 7 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಜನವಸತಿ ಪ್ರದೇಶಗಳಲ್ಲಿ ಯೋಗ್ಯವಾದ ಸ್ಥಳಗಳಲ್ಲಿ ಮಾತ್ರವೇ ಪಟಾಕಿ ಮಾರಲು ಅವಕಾಶ ನೀಡಬೇಕು’ ಎಂದು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಪಟಾಕಿ ಮಾರಾಟಗಾರರು ಸಲ್ಲಿಸಿದ್ದ ಅರ್ಜಿಗಳನ್ನು ಶನಿವಾರ ವಿಲೇವಾರಿ ಮಾಡಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ವಸತಿ ಪ್ರದೇಶಗಳಲ್ಲಿ ಖಾಲಿ ಜಾಗಗಳು ಮತ್ತು ಆಟದ ಮೈದಾನಗಳಲ್ಲಿ ಮಾತ್ರವೇ ಚಿಲ್ಲರೆ ಮಾರಾಟಕ್ಕೆ ಅವಕಾಶ ನೀಡಬೇಕು’ ಎಂದು ನಿರ್ದೇಶಿಸಿದೆ.

‘ಮಾರಾಟ ಪರವಾನಗಿ ಕೋರಿ ಸಲ್ಲಿಸಲಾಗುವ ಅರ್ಜಿಗಳನ್ನು ಸಂಬಂಧಿಸಿದ ಬಿಬಿಎಂಪಿ ಹಾಗೂ ಬೆಂಗಳೂರು ಪೊಲೀಸ್ ಕಮಿಷನರ್ ಕಾನೂನು ರೀತ್ಯಾ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು’ ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT