ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಆರ್‌ಸಿಎಲ್‌ ಮೇಲೆ ಎಸ್ಮಾ ಜಾರಿಗೆ ಹೈಕೋರ್ಟ್‌ ತಡೆ

Last Updated 7 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್‌ಸಿಎಲ್‌) ನೌಕರರ ಮೇಲೆ ಹೇರಲಾಗಿದ್ದ ಕರ್ನಾಟಕ ಅಗತ್ಯ ವಸ್ತುಗಳ ಸೇವಾ ಕಾಯ್ದೆ ‘ಎಸ್ಮಾ’ ಜಾರಿ ಅಧಿಸೂಚನೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ರಾಜ್ಯ ನಗರಾಭಿವೃದ್ಧಿ ಇಲಾಖೆ 2017ರ ಜುಲೈ 7ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಬೆಂಗಳೂರು ಮೆಟ್ರೊ ನೌಕರರ ಸಂಘಟನೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಕೇಂದ್ರ ನಗರಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಹಾಗೂ ಬಿಎಂಆರ್‌ಸಿಎಲ್‌ಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

2017ರ ಜುಲೈ ತಿಂಗಳ ಮೊದಲ ವಾರದಲ್ಲಿ ಮೆಟ್ರೊ ಸಿಬ್ಬಂದಿ ಹಾಗೂ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ ನಡುವೆ ಕಲಹ ನಡೆದಿತ್ತು. ಈ ವೇಳೆ ಮೆಟ್ರೊ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದನ್ನು ವಿರೋಧಿಸಿ ಮೆಟ್ರೊ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದರು. ಇದರಿಂದಾಗಿ ಮೆಟ್ರೊ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಈ ವ್ಯತ್ಯಯ ದೂರ ಮಾಡಲು ಸರ್ಕಾರ ಎಸ್ಮಾ ಜಾರಿ ಮಾಡಿತ್ತು.

ಮಧ್ಯಂತರ ತಡೆ ಆದೇಶ ಮುಂದಿನ ವಿಚಾರಣೆವರೆಗೂ ಜಾರಿಯಲ್ಲಿರುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT