ಮಳೆ: ಗೋಡೆ ಕುಸಿದು ಸಾವು

ಶನಿವಾರ, ಮೇ 25, 2019
33 °C
ಮಲಗಿದ್ದ ಯುವಕನಿಗೆ ಸಿಡಿಲು ಬಡಿದು ಸಾವು

ಮಳೆ: ಗೋಡೆ ಕುಸಿದು ಸಾವು

Published:
Updated:

ಬೆಂಗಳೂರು: ರಾಜ್ಯದ ವಿವಿಧೆಡೆ ಶನಿವಾರ ಮಳೆಯ ಅಬ್ಬರ ಕಡಿಮೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಓಬದೇನಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಮನೆ ಗೋಡೆ ಕುಸಿದು ಬಿದ್ದು ಮುನಿರತ್ನ (22) ಎಂಬುವವರು ಮೃತಪಟ್ಟಿದ್ದಾರೆ.

ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಗುಂಡಾಪುರದಲ್ಲಿ ಶುಕ್ರವಾರ ತಡರಾತ್ರಿ ಮಲಗಿದ್ದ ವಿಶ್ವನಾಥ ಬಸವರಾಜ ಕುಂಬಾರ (19) ಎಂಬುವವರು ಸಿಡಿಲು ಬಡಿದು ಯುವಕ ಮೃತಪಟ್ಟಿದ್ದಾರೆ

ರಾಮನಗರ ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ ಮಳೆ ಸುರಿದಿದ್ದು. ರಾಮನಗರದ ರಂಗರಾಯರದೊಡ್ಡಿ ಕೆರೆಯ ಕೋಡಿ ಬಿದ್ದು ಕೆಳಹಂತದ ರಸ್ತೆ ಕೊಚ್ಚಿಹೋಗಿದೆ.

ಶಿವಮೊಗ್ಗ ಜಿಲ್ಲೆಯ ಹಲವೆಡೆ ಶನಿವಾರ ಸಾಧಾರಣ ಮಳೆಯಾಗಿದೆ. ತೀರ್ಥಹಳ್ಳಿ, ಹೊಸನಗರ ತಾಲ್ಲೂಕಿನ ಕೆಲವು ಭಾಗಗಳಲ್ಲಿ ಮಳೆ ಸುರಿದಿದೆ.

ಬಾಗಲಕೋಟೆ ಹಾಗೂ ಹುಬ್ಬಳ್ಳಿ ನಗರದ ಕೆಲವು ಕಡೆ ಶನಿವಾರ ಮಧ್ಯಾಹ್ನ ಅರ್ಧ ತಾಸು ಮಳೆಯಾಗಿದೆ.

ಬಳ್ಳಾರಿ ಜಿಲ್ಲೆಯ ಮರಿಯಮ್ಮನಹಳ್ಳಿ ಹೋಬಳಿಯಲ್ಲಿ ಶುಕ್ರವಾರ ರಾತ್ರಿ ಭಾರಿ ಮಳೆ ಸುರಿದಿದ್ದು, ಸಮೀಪದ ಅಯ್ಯನಹಳ್ಳಿ ಗ್ರಾಮದ ಕೆರೆ ಕೋಡಿ ಬಿದ್ದು ಸುಮಾರು 60 ಎಕರೆ ಬೆಳೆ ಹಾನಿಯಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 11ರ ಸುಮಾರಿಗೆ ಆರಂಭವಾದ ಮಳೆ ಬೆಳಗಿನವರೆಗೂ ಧಾರಾಕಾರ ಸುರಿದಿತು. ರಾಯಚೂರು ಜಿಲ್ಲೆಯಾದ್ಯಂತ ಶನಿವಾರ ಮಧ್ಯಾಹ್ನದಿಂದ ಭಾರಿ ಮಳೆ ಸುರಿದು, ಜನಜೀವನ ಅಸ್ತವ್ಯಸ್ತಗೊಂಡಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry