₹2 ಕೋಟಿ ಮೌಲ್ಯದ ಹೆರಾಯಿನ್ ಪತ್ತೆ

ಸೋಮವಾರ, ಜೂನ್ 17, 2019
27 °C

₹2 ಕೋಟಿ ಮೌಲ್ಯದ ಹೆರಾಯಿನ್ ಪತ್ತೆ

Published:
Updated:
₹2 ಕೋಟಿ ಮೌಲ್ಯದ ಹೆರಾಯಿನ್ ಪತ್ತೆ

ಕಾಸರಗೋಡು: ವಯನಾಡು ಜಿಲ್ಲೆಯ ಮಾನಂದವಾಡಿಯಲ್ಲಿ ₹ 2 ಕೋಟಿ ಮೌಲ್ಯದ ಒಂದು ಕೆಜಿ ಹೆರಾಯಿನ್ ವಶಪಡಿಸಿಕೊಂಡಿರುವ ಪೊಲೀಸರು, ಐವರನ್ನು ಬಂಧಿಸಿದ್ದಾರೆ.

ಬೇಕಲದ ಕುನ್ನುಮ್ಮಲ್ ಅಶೋಕನ್ (45), ಚೀಮೇನಿಯ ಬಾಲಕೃಷ್ಣನ್ (47) ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಅಜಯ್ ಸಿಂಗ್ ಸೇರಿದಂತೆ ಐವರ ತಂಡ ಹೆರಾಯಿನ್‌ ಮಾರಾಟ ಮಾಡಲು ಯತ್ನಿಸಿದಾಗ ಅವರನ್ನು ಬಂಧಿಸಲಾಗಿದೆ.

ಹೆರಾಯಿನ್‌ ಅನ್ನು ಅಜಯ್‌ಸಿಂಗ್‌ ಉತ್ತರಪ್ರದೇಶದಿಂದ ಕೇರಳಕ್ಕೆ ತಂದಿದ್ದ. ಅದನ್ನು ಮಾರಾಟ ಮಾಡಲು ಇತರ ನಾಲ್ವರು ಆರೋಪಿಗಳು, ಈತನ ಜತೆಯಲ್ಲಿ ಮಾನಂದವಾಡಿಯ ಲಾಡ್ಜ್‌ನಲ್ಲಿದ್ದಾಗ ಪೊಲೀಸರು ದಾಳಿ ನಡೆಸಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry